ತುಮಕೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಆರೋಪಗಳ ಮೇಲೆ ಆರೋಪ ಬರುತ್ತಿದ್ದು ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೊದಲಿನಂತಿಲ್ಲ, ಒದ್ದಾಡುತ್ತಿದ್ದಾರೆ ಎಂದು ಕೇಂದ್ರ ಸಚಿವರಾಗಿರುವಂತಹ ವಿ ಸೋಮಣ್ಣ ಅವರು ಹೇಳಿದ್ದಾರೆ.
ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಳೆದ ಒಂದೂವರೆ ವರ್ಷದಿಂದ ರಾಜ್ಯದಲ್ಲಿ ಸರ್ಕಾರ ಎಲ್ಲಿದೆ ಎಂದು ಹುಡುಕಾಟ ನಡೆಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಈ ಹಿಂದಿನ 5 ವರ್ಷದಂತೆ ಈಗ ಆಡಳಿತ ನಡೆಸಲು ಸಾಧ್ಯವಾಗುತ್ತಿಲ್ಲ. ಹಳೇ ಸಿದ್ದರಾಮಯ್ಯನವರು ಈಗಿಲ್ಲ, ಹೊಸ ಸಿದ್ದರಾಮಯ್ಯ ಈ ಸರ್ಕಾರದಲ್ಲಿ ಒದ್ದಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಆರೋಪಿಸಿದ್ದಾರೆ.
ನಾಗಮಂಗಲದಲ್ಲಿ 2023ರಲ್ಲಿಯೂ ಇದೇ ರೀತಿ ಘಟನೆಯಾಗಿತ್ತು. ಈಗ ಮತ್ತೆ ಮರುಕಳಿಸಿದೆ. ನಿಷೇಧಿತ ಸಂಘಟನೆಗಳು ಮುನ್ನಲೆಗೆ ಬರುತ್ತಿವೆ ಎಂದರೆ ಏನರ್ಥ? ಎಂದು ಪ್ರಶ್ನಿಸಿದ್ದಾರೆ.