ಚೊಚ್ಚಲ ಪಂದ್ಯದಲ್ಲೇ ಅರ್ಧಶತಕ ಸಿಡಿಸಿದ ಸರ್ಫರಾಜ್ ಖಾನ್

ಚೊಚ್ಚಲ ಪಂದ್ಯದಲ್ಲೇ ಅರ್ಧಶತಕ ಸಿಡಿಸಿದ ಸರ್ಫರಾಜ್ ಖಾನ್

ಬೆಂಗಳೂರು: ರಾಜ್​ಕೋಟ್​ನಲ್ಲಿ ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಪದಾರ್ಪಣೆ ಮಾಡುತ್ತಿರುವ ಸರ್ಫರಾಜ್ ಖಾನ್ ತಮ್ಮ ಚೊಚ್ಚಲ ಪಂದ್ಯದಲ್ಲೇ ಭರ್ಜರಿ ಅರ್ಧಶತಕ ಬಾರಿಸಿದ್ದಾರೆ. ಸರ್ಫರಾಜ್ ಖಾನ್ ಕೇವಲ 48 ಎಸೆತಗಳಲ್ಲಿ 7 ಬೌಂಡರಿ ಮತ್ತು 1 ಸಿಕ್ಸರ್ ಸಹಿತ ತಮ್ಮ ಅರ್ಧಶತಕ ಪೂರೈಸಿದರು.

ಸರ್ಫರಾಜ್ ಅರ್ಧಶತಕ ಸಿಡಿಸುತ್ತಿದ್ದಂತೆ ಮಗನ ಆಟ ನೋಡಲು ಮೈದಾನದಲ್ಲಿ ಉಪಸ್ಥಿತರಿದ್ದ ಅವರ ತಂದೆ ಹಾಗೂ ಅಭಿಮಾನಿಗಳು ಚಪ್ಪಾಳೆ ತಟ್ಟಿ ಸಂಭ್ರಮಾಚರಣೆ ನಡೆಸಿದರು.

ಸರ್ಫರಾಜ್ ಖಾನ್ ಈ ಅರ್ಧಶತಕದ ಹೊರತಾಗಿ, ಆರನೇ ವಿಕೆಟ್‌ಗೆ ಜಡೇಜಾ ಅವರೊಂದಿಗೆ 50 ಕ್ಕೂ ಹೆಚ್ಚು ರನ್‌ಗಳ ಪಾಲುದಾರಿಕೆಯನ್ನು ಸಹ ಮಾಡಿದರು. ಅಂತಿಮವಾಗಿ ರನೌಟ್​ಗೆ ಬಲಿಯಾದ ಸರ್ಫರಾಜ್ ಖಾನ್ 66 ಎಸೆತಗಳಲ್ಲಿ 62 ರನ್​ಗಳ ಸ್ಮರಣೀಯ ಇನ್ನಿಂಗ್ಸ್ ಆಡಿದರು.

 

ಫ್ರೆಶ್ ನ್ಯೂಸ್

Latest Posts

Featured Videos