ಜನಸ್ಪಂದನ: ವಿಶೇಷ ಚೇತನ ವ್ಯಕ್ತಿಗೆ ಸಿಎಂ ಸ್ಥಳದಲ್ಲೇ ಪರಿಹಾರ

ಜನಸ್ಪಂದನ: ವಿಶೇಷ ಚೇತನ ವ್ಯಕ್ತಿಗೆ ಸಿಎಂ ಸ್ಥಳದಲ್ಲೇ ಪರಿಹಾರ

ಬೆಂಗಳೂರು: ವಿಧಾನಸೌಧ ಆವರಣದಲ್ಲಿ ಸಿಎಂ ಸಿದ್ದರಾಮಯ್ಯ  ಅವರ ನೇತೃತ್ವದಲ್ಲಿ ರಾಜ್ಯ ಮಟ್ಟದ ಜನಸ್ಪಂದನ ಕಾರ್ಯಕ್ರಮ ನಡೆಯುತ್ತಿದ್ದು. ವಿವಿಧ ಜಿಲ್ಲೆಗಳಿಂದ ಸಾವಿರಾರು ಸಂಖ್ಯೆಯಲ್ಲಿ ಜನ ಸಾಗರವೇ ಹರಿದುಬಂದಿದೆ. ಈ ಕಾರ್ಯಕ್ರಮಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ಮತ್ತು ಪ್ರಶಂಸೆ ವ್ಯಕ್ತವಾಗಿದೆ. ಇಂದು ಬೆಳಗ್ಗೆಯಿಂದಲೇ ಸಾವಿರಾರು ಜನ ತಮ್ಮ ಸಮಸ್ಯೆಯನ್ನು ಸಿಎಂ ಸಿದ್ದರಾಮಯ್ಯನವರ ಬಳಿ ಹೇಳಲು ವಿಧಾನಸೌಧಕ್ಕೆ ಆಗಮಿಸಿದ್ದಾರೆ. ಖುದ್ದಾಗಿ ಸಿಎಂ ಸಿದ್ದರಾಮಯ್ಯ ಅಹವಾಲು ಸ್ವೀಕರಿಸಲಿದ್ದು ಸಮಸ್ಯೆಗೆ ಸಾಕಾದಷ್ಟು ಸ್ಥಳದಲ್ಲೇ ಪರಿಹಾರ ನೀಡುತ್ತಿದ್ದಾರೆ.

ಬೆಂಗಳೂರಿನಲ್ಲಿ ಇನ್ನೂ ಜನ ಸ್ಪಂದನ ಕಾರ್ಯಕ್ರಮ ನಡೆಯುತ್ತಿದ್ದು, ಸಮಸ್ಯೆ ಹೇಳಿಕೊಂಡು ಬಂದ ವಿಶೇಷ ಚೇತನ ವ್ಯಕ್ತಿಗೆ ಸ್ಥಳದಲ್ಲಿ ಸಿದ್ದರಾಮಯ್ಯನವರು ಪರಿಹಾರ ನೀಡಿದ್ದಾರೆ. ವಿಶೇಷ ಚೇತನ ಸತ್ಯನಾರಾಯಣ ಅವರು ತಮ್ಮ ಡಯಾಲಿಸಿಸ್ ಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ನೆರವು ಕೊಡಿಸುವಂತೆ ಇಂದು ನಡೆಯುತ್ತಿರುವ ಜನಸ್ಪಂದನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಳಿ ಮನವಿ ಮಾಡಿದ್ದರು.

ಬೆಂಗಳೂರಿನ ಜೆಜೆ ನಗರ ನಿವಾಸಿ ಎನ್ ಶ್ರೀಧರ್ ಅವರ ಎರಡು ಮೂತ್ರ ಪಿಂಡಗಳು ವಿಫಲ ವಾಗಿದ್ದು ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಆರ್ಥಿಕ ನೆರವು ಒದಗಿಸುವಂತೆ ಇಂದು ನಡೆಯುತ್ತಿರುವ ಜನಸ್ಪಂದನ ಕಾರ್ಯಕ್ರಮಕ್ಕೆ ಆಗಮಿಸಿ ಮನವಿ ಸಲ್ಲಿಸಿದರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶ್ರೀಧರ್ ಅವರ ಸಮಸ್ಯೆಗೆ ಸ್ಪಂದಿಸಿ ಸಾಧ್ಯವಾದಷ್ಟು ಶೀಘ್ರ ಪರಿಹಾರ ಒದಗಿಸುವ ಭರವಸೆಯನ್ನು ನೀಡಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos