ಭೀಕರ ಅಪಘಾತದಲ್ಲಿ ಇಬ್ಬರೂ ಸ್ಥಳದಲ್ಲೇ ಸಾವು

ಭೀಕರ ಅಪಘಾತದಲ್ಲಿ ಇಬ್ಬರೂ ಸ್ಥಳದಲ್ಲೇ ಸಾವು

ವಿಜಯಪುರ: ಇತ್ತೀಚಿನ ದಿನಗಳಲ್ಲಿ ಅಪಘಾತಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಗುತ್ತಾಯಿದೆ. ವಿಜಯಪುರ ಜಿಲ್ಲೆಯ ಮುದ್ದೆಬಿಹಾಳ ತಾಲೂಕಿನ ಡವಳಗಿಯಲ್ಲಿ ಇಂದು ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮದುವೆ ಕಾರ್ಯಕ್ರಮ ಮುಗಿಸಿ ವಾಪಾಸ್ ಆಗುತ್ತಿದ್ದಾಗ ಕಾರು ಪಲ್ಟಿಯಾಗಿ ಈ ದುರಂತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿ ಬಿದ್ದಿದೆ. ಪರಿಣಾಮ ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದಾರೆ.

ದೊಡ್ಡಯ್ಯ ಪುರಾಣಿಕಮಠ (37), ಪುಷ್ಪಾವತಿ ಹಿರೇಮಠ (55) ಮೃತ ದುರ್ದೈವಿಗಳು. ಮೃತರಿಬ್ಬರೂ ಬಸವನಬಾಗೇವಾಡಿ ತಾಲೂಕಿನ ಕರಭಂಟನಾಳ ಗ್ರಾಮದ ನಿವಾಸಿಗಳು. ಗಾಯಾಳುಗಳನ್ನು ವಿಜಯಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಈ ಪ್ರಕರಣವನ್ನು ಮುದ್ದೆಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ.

ಫ್ರೆಶ್ ನ್ಯೂಸ್

Latest Posts

Featured Videos