ಸ್ಥಳದಲ್ಲೇ ಮೂವರು ಸಾವು

ಸ್ಥಳದಲ್ಲೇ ಮೂವರು ಸಾವು

ಯಾದಗಿರಿ, ಜ.10 : ಕಬ್ಬಿನ ಲಾರಿಗೆ ಆಟೋ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂರು ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಯಾದಗರಿ ಜಿಲ್ಲೆಯಲ್ಲಿ ನಡೆದಿದೆ. ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂರು ಜನ ಮೃತಪಟ್ಟಿದ್ದಾರೆ. ಯಾದಗಿರಿ ನಗರದ ಗಡೇಸೂಗುರ್ ಗೇಟ್ ಬಳಿ ಈ ದುರ್ಘಟನೆ ನಡೆದಿದೆ. ಆಟೋ ಯಾದಗಿರಿಯಿಂದ ವಡೇಗೇರಾದ ಕಡೆ ತೆರೆಳುತ್ತಿತ್ತು. ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲಿ ನಿಂತಿದ್ದ ಲಾರಿಗೆ ಆಟೋ ಡಿಕ್ಕಿ ಹೊಡೆದಿದೆ. ಆಟೋ ಸಂಪೂರ್ಣ ನಜ್ಜುಗುಜ್ಜಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರನ್ನು ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಹಲಕಟ್ಟಿ ಗ್ರಾಮದ ಸಿದ್ದಮ್ಮ ಹಾಗೂ ರಮೇಶ ಮತ್ತು ವಡಗೇರಾ ತಾಲೂಕಿನ ಹಾಲಗೇರಾ ಗ್ರಾಮದ ಪಾಷಾ ಎಂದು ಗುರುತಿಸಲಾಗಿದೆ. ಸಾವನ್ನಪ್ಪಿದ ಸಿದ್ದಮ್ಮ ಮತ್ತು ರಮೇಶ ತಾಯಿ ಮಗ ಎಂದು ತಿಳಿದು ಬಂದಿದೆ.

ಫ್ರೆಶ್ ನ್ಯೂಸ್

Latest Posts

Featured Videos