ಬೆಂಗಳೂರು, ಆ. 27 : ಟಿಪ್ಪರ್ ಗೆ ಕಾರಿ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಆನೆಕಲ್ ತಾಲೂಕಿನ ಸರ್ಜಾಪುರದಲ್ಲಿ ನಡೆದಿದೆ. ಉತ್ತರ ಪ್ರದೇಶ ಮೂಲದ ಅಂಜನಿ ಯಾದವ್ (31), ನೇಹಾ ಯಾದವ್ (28) , ಧ್ರುವ ( 02), ಶುಭ್ರಂ ಸಂತೋಷ್ ( 26) ಮೃತಪಟ್ಟ ದುರ್ದೈವಿಗಳು.
ಘಟನೆಯಲ್ಲಿ ಸಂತೋಷ್ ಮತ್ತು ಸಾನ್ವಿ ಎಂಬವರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರೆಲ್ಲಾ ಒಂದೇ ಕುಟುಂಬಕ್ಕೆ ಸೇರಿದವರು ಮತ್ತು ಸಾಫ್ಟವೇರ್ ಇಂಜಿನಿಯರ್ ಗಳು ಎಂದು ವರದಿಯಾಗಿದೆ.