12 ದಿನದ ಮಗು ಸೇರಿ ಒಂದೇ ಕುಟುಂಬದ ನಾಲ್ವರು ನಿಗೂಢ ಸಾಹು

12 ದಿನದ ಮಗು ಸೇರಿ ಒಂದೇ ಕುಟುಂಬದ ನಾಲ್ವರು ನಿಗೂಢ ಸಾಹು

ಭೋಪಾಲ್: 12 ದಿನದ ಮಗು ಸೇರಿ ಒಂದೇ ಕುಟುಂಬದ ನಾಲ್ವರು ನಿಗೂಢವಾಗಿ ಮೃತಪಟ್ಟ ಘಟನೆ ಮಂಗಳವಾರ ಮಧ್ಯಪ್ರದೇಶದ ರಾಯಿಸೆನ್ ಜಿಲ್ಲೆಯಲ್ಲಿ ನಡೆದಿದೆ.

ಸಂಜುವಿನ ಪತ್ನಿ, ಆತನ 12 ದಿನದ ಮಗಳು, 11 ವರ್ಷದ ಬಾಮೈದ ಹಾಗೂ ಅತ್ತೆ ಮೃತ ವ್ಯಕ್ತಿಗಳು ಎಂದು ತಿಳಿದು ಬಂದಿದೆ. ನಾಲ್ವರ ಮೃತದೇಹ ಮನೆಯಲ್ಲಿ ಪತ್ತೆಯಾಗಿದ್ದು, ಮನೆಯ ಮಾಲೀಕ ಸಂಜು ಬುರಿಯಾ(25) ಗಂಭೀರ ಸ್ಥಿತಿಯಲ್ಲಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಪೊಲೀಸರು ವಿಧಿವಿಜ್ಞಾನ ಪ್ರಯೋಗಾಲಯದ ತಜ್ಞರು ಹಾಗೂ ಶ್ವಾನ ದಳ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮನೆಯಲ್ಲಿ ಚಿಮಣಿಯ ಹೊಗೆಯಿಂದಾಗಿ ಅಮ್ಲಜನಕ ಕೊರತೆಯಾಗಿ ಈ ಘಟನೆ ಸಂಭವಿಸಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos