ಮತ್ತೆ ಈರುಳ‍್ಳಿ ಬೆಲೆ ಏರಿಕೆ

ಮತ್ತೆ ಈರುಳ‍್ಳಿ ಬೆಲೆ ಏರಿಕೆ

ಬೆಂಗಳೂರು, ನ. 27: ರಾಜ್ಯದಲ್ಲಿ ಇತ್ತೀಚಿಗೆ ಕಳೆದ ಒಂದು ವಾರದಿಂದ ಈರುಳ್ಳಿ ಬೆಲೆ ಏರುತ್ತಲೇ ಇದೆ. ಸಗಟು ಮಾರುಕಟ್ಟೆಯಲ್ಲಿ ಈರುಳ್ಳಿ ಕೆ.ಜಿ.ಗೆ 80ರು. ನಿಗದಿಯಾಗಿದ್ದು, ಚಿಲ್ಲರೆ ಮಾರುಕಟ್ಟೆಯಲ್ಲಿ ವ್ಯಾಪಾರಿಗಳು ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿದ್ದಾರೆ.

ನವೆಂಬರ್ನಲ್ಲಿ ಹೊಸ ಬೆಳೆಯ ನಿರೀಕ್ಷೆಯಲ್ಲಿದ್ದ ರಾಜ್ಯದ ಈರುಳ್ಳಿ ಬೆಳೆಗಾರರು ಮಳೆಗೆ ಬೆಳೆದ ಬೆಳೆ ಕಳೆದುಕೊಂಡು ನಷ್ಟಕ್ಕೆ ಒಳಗಾಗಿದ್ದಾರೆ. ಮಾರುಕಟ್ಟೆಯಲ್ಲಿ ಈರುಳ್ಳಿ ಬೇಡಿಕೆಗೆ ತಕ್ಕಷ್ಟುಪೂರೈಕೆಯಾಗುತ್ತಿಲ್ಲ. ಇದರಿಂದ ಒಂದು ವಾರದಲ್ಲಿ ಬೆಲೆ ಹೆಚ್ಚಳವಾಗಿದೆ.

ಬೆಂಗಳೂರಿನಲ್ಲಿ ತಿಂಗಳ ಹಿಂದೆ ಕೆಜಿಗೆ 80 ರೂಪಾಯಿ ಇದ್ದ ಈರುಳ್ಳಿ ಬೆಲೆ ಈಗ ಕೆಜಿಗೆ 140 ರೂಪಾಯಿ ಆಗಿದೆ. ಅತ್ಯಂತ ಕಳಪೆ ಗುಣಮಟ್ಟದ ಈರುಳ್ಳಿಯೂ ಇದೇ ಬೆಲೆಗೆ ಮಾರಾಟವಾಗುತ್ತಿದೆ. ಹೀಗಾಗಿ, ಜನರು ಈರುಳ್ಳಿ ಇಲ್ಲದೆಯೂ ಅಡುಗೆ ಮಾಡುತ್ತೇವೆ ಎನ್ನುತ್ತಿದ್ದಾರೆ.

ಬೆಲೆ ಏರಿಕೆ ಬೆನ್ನಲ್ಲೇ ಗ್ರಾಹಕರು ಈರುಳ್ಳಿ ಖರೀದಿಸಲು ಹಿಂದೇಟು ಹಾಕುತ್ತಿದ್ದಾರೆ. ಹೀಗಾಗಿ, ಈರುಳ್ಳಿ ವ್ಯಾಪಾರ ಕಡಿಮೆಯಾಗಿದೆ. ಇದರಿಂದ ಮಾರಾಟಕ್ಕೆ ತಂದ ಈರುಳ್ಳಿ ಕೊಳೆತು ಹೋಗುವ ಭಯವೂ ಅಂಗಡಿಕಾರರಿಗೆ ಕಾಡುತ್ತಿದೆ.

 

ಫ್ರೆಶ್ ನ್ಯೂಸ್

Latest Posts

Featured Videos