ಕರ್ನಾಟಕಕ್ಕಷ್ಟೇ ಸಂಕಷ್ಟ! ತಮಿಳುನಾಡಿಗೆ ನೀರು ಹರಿಸಬಾರದು ಎಂದ ಹೆಚ್ ಡಿ ಕೆ

ಕರ್ನಾಟಕಕ್ಕಷ್ಟೇ ಸಂಕಷ್ಟ! ತಮಿಳುನಾಡಿಗೆ ನೀರು ಹರಿಸಬಾರದು ಎಂದ ಹೆಚ್ ಡಿ ಕೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೊರತೆಯಿಂದ ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಮಂದಾಕಿನಿ ಕಾವೇರಿ ನದಿಯಲ್ಲಿ ನೀರಿನ ಪ್ರಮಾಣ ಕಡಿಮೆ ಇದೆ.
ಕರ್ನಾಟಕದಲ್ಲಿ ಕಾವೇರಿ ಕಿಚ್ಚು ಹೆಚ್ಚಿದೆ. ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಚಾರವಾಗಿ ಸರ್ಕಾರದ ವಿರುದ್ಧ ರೈತರು ಹಾಗೂ ವಿವಿಧ ಸಂಘಟನೆ ಪ್ರತಿಭಟನೆ ನಡೆಸುತ್ತಿವೆ. ಇನ್ನು ರಾಜ್ಯದಲ್ಲಿ ವಾಡಿಕೆ ಪ್ರಮಾಣದಲ್ಲಿ ಮಳೆಯಾಗದೆ ಬರಗಾಲ ಆವರಿಸಿದೆ. ಸಚಿವ ಡಿ.ಸುಧಾಕರ ವಿರುದ್ಧ ಭೂಕಬಳಿಕೆ, ಜಾತಿ ನಿಂದನೆ ಪ್ರಕರಣ ದಾಖಲಾಗಿದೆ.
ಕರ್ನಾಟಕಕ್ಕಷ್ಟೇ ಸಂಕಷ್ಟವೇ? ತಮಿಳುನಾಡಿಗೆ ಯಾವ ಸಂಕಷ್ಟವೂ ಇಲ್ಲ. ಆದೇಶ ಪಾಲನೆಗಷ್ಟೇ ಕರ್ನಾಟಕ, ಅನುಭವಿಸಲಿಕ್ಕೆ ತಮಿಳುನಾಡು!! ಹೀಗಿದೆ ನಮ್ಮ ಸ್ಥಿತಿ. ಆ ರಾಜ್ಯವು ಎಷ್ಟು ವಿಸ್ತೀರ್ಣದಲ್ಲಿ ಬೆಳೆ ಬೆಳೆಯುತ್ತಿದೆ ಎಂಬ ಅಂಕಿ-ಅಂಶದ ಬಗ್ಗೆ ಸಮಿತಿಯಲ್ಲಿ ಚರ್ಚಿಸಿಲ್ಲ ಎನ್ನುವುದಕ್ಕೆ ಆ ಸಮಿತಿಯ ಆದೇಶವೇ ಸಾಕ್ಷಿ- ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ
ನಿತ್ಯವೂ ನೆರೆರಾಜ್ಯಕ್ಕೆ 5,000 ಕ್ಯೂಸೆಕ್‌ ಕಾವೇರಿ ನೀರು ಹರಿಸಬೇಕೆಂದು ಕರ್ನಾಟಕಕ್ಕೆ ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ಕೊಟ್ಟಿರುವ ನಿರ್ದೇಶನ ಆಘಾತಕಾರಿ. ಯಾವ ಕಾರಣಕ್ಕೂ ರಾಜ್ಯ ಸರಕಾರ ನೀರು ಹರಿಸಬಾರದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಟ್ವೀಟ್ ಮೂಲಕ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos