ಬೆಂಗಳೂರು: ಆಗಸ್ಟ್ 26:ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಶಿವಾಜಿನಗರ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸೂಪರ್ ಸ್ಪೆಷಾಲಿಟಿ ಬಿ.ಬಿ.ಎಂ.ಪಿ ಆಸ್ಪತ್ರೆ ಕಟ್ಟಡವನ್ನು ಉದ್ಘಾಟಿಸಿದರು.
ಉಪಮುಖ್ಯಮಂತ್ರಿ ಡಾ: ಸಿ.ಎನ್.ಅಶ್ವತ್ಥ್ ನಾರಾಯಣ್, ವೈದ್ಯಕೀಯ ಶಿಕ್ಷಣ ಸಚಿವ ಡಾ: ಕೆ.ಸುಧಾಕರ್, ಶಾಸಕ ರಿಜ್ವಾನ್ ಅರ್ಷದ್, ವಸತಿ ಸಚಿವ ವಿ.ಸೋಮಣ್ಣ, ಬಿ.ಬಿ.ಎಂ.ಪಿ ಮಹಾಪೌರ ಗೌತಮ್ ಕುಮಾರ್ , ಆಯುಕ್ತ ಎನ್.ಮಂಜುನಾಥ್ ಪ್ರಸಾದ್ ಉಪಸ್ಥಿತರಿದ್ದರು.