ಬೆಂಗಳೂರು: ಖಾಸಗಿ ಶಾಲೆಗಳಲ್ಲಿ ನಾಡಗೀತೆ ಹಾಡುವುದು ಕಡ್ಡಾಯವಲ್ಲ ಎಂದು ಅರ್ಥ ಬರುವ ಸುತ್ತೋಲೆಯನ್ನು ವರ್ಟಿಸಿದ್ದ ರಾಜ್ಯ ಸರ್ಕಾರ ವಿವಾದವಾಗುತ್ತಿದ್ದಂತೆ ಆದೇಶವನ್ನು ತಿದ್ದು ಮಾಡಿ ಆದೇಶ ಹೊರಡಿಸಿದೆ.
ಖಾಸಗಿ ಶಾಲೆಗಳಿಗೆ ನಾಡಗೀತೆ ಹಾಡುವುದಕ್ಕೆ ವಿನಾಯಿತಿ ನೀಡಿದ ಸರ್ಕಾರ. ಸರ್ಕಾರಿ ಶಾಲೆಗಳು ಮತ್ತು ಅನುದಾನದ ಶಾಲೆಗಳಲ್ಲಿ ಮಾತ್ರ ನಾಡಗೀತೆ ಆಡಬೇಕು ಎಂದು ಹೊರಡಿಸಿದ ಆದೇಶಕ್ಕೆ ಸರ್ಕಾರ ತಿದ್ದುಪಡಿ ತಂದಿದೆ.
ಆದೇಶ ಪ್ರತಿ ಹೊರ ಬೀಳುತ್ತಿದ್ದಂತೆ ಸಾರ್ವಜನಿಕರು ವಿಪಕ್ಷಗಳ ನಾಯಕರು ಸರ್ಕಾರ ನಡೆಗೆ ಆಕ್ರೋಶ ಅವರ ಹಾಕಿದ್ದರು. ಅದಲ್ಲದೆ ಕೂಡಲೇ ಆದೇಶ ವಾಪಸ್ ಪಡೆಯುವಂತೆ ಆಗ್ರಹಿಸಿದರು. ಇದೀಗ ವಿವಾದ ಭುಗಿಲೆದ್ದ ಬೆನ್ನಲ್ಲೇ ಸರ್ಕಾರ ಆದೇಶ ತಿದ್ದುಪಡಿ ತರುವ ಮೂಲಕ ಶಾಂತಗೊಳಿಸುವ ಪ್ರಯತ್ನ ಮಾಡಿದೆ.