ಬೆಂಗಳೂರು, ಡಿ. 30: ಕರ್ನಾಟಕದ ಜನತೆ ಶಾಂತಿ ಕಾಪಾಡಬೇಕು ಇದರಿಂದ ಮಹಾರಾಷ್ಟ್ರಕ್ಕೆ ಕರ್ನಾಟಕದ ಒಂದಿಂಚು ಜಾಗವನ್ನು ಬಿಟ್ಟುಕೊಡುವುದಿಲ್ಲ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಿ.ಎಸ್. ಯಡಿಯೂರಪ್ಪ, ಮಹಾರಾಷ್ಟ್ರ ಕರ್ನಾಟಕ ರಾಜ್ಯಗಳಿಗೆ ಯಾವ ಯಾವ ಪ್ರದೇಶಗಳು ಸೇರಬೇಕು ಎಂಬುದು ಹಿಂದೆಯೇ ನಿರ್ಧಾರವಾಗಿದೆ. ಇದೀಗ ಮಹಾರಾಷ್ಟ್ರ ಸರ್ಕಾರ ಗೊಂದಲ ಸೃಷ್ಟಿಸುತ್ತಿದೆ.
ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಅವರು ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಗಡಿ ವಿವಾದವನ್ನು ಹುಟ್ಟುಹಾಕುತ್ತಿದ್ದಾರೆ. ಆದರೆ, ಕರ್ನಾಟಕದ ಒಂದಿಂಚು ಜಾಗವನ್ನು ನಾವು ಮಹಾರಾಷ್ಟ್ರಕ್ಕೆ ಬಿಟ್ಟುಕೊಡುವುದಿಲ್ಲ, ಕನ್ನಡಿಗರು ಶಾಂತಿಯನ್ನು ಕಾಪಾಡಿ ಎಂದು ಮನವಿ ಮಾಡಿದರು.