“ಫುಡ್ ಪಾರ್ಕ್ ಗೆ” 4 ಸಾವಿರ ಕೋಟಿ ರೂ.ಅನುದಾನ

  • In State
  • July 3, 2020
  • 200 Views
“ಫುಡ್ ಪಾರ್ಕ್ ಗೆ” 4 ಸಾವಿರ ಕೋಟಿ ರೂ.ಅನುದಾನ

ಬೆಂಗಳೂರು: ರಾಜ್ಯದಲ್ಲಿ ಪ್ರಸಕ್ತ 4 ಫುಡ್ ಪಾರ್ಕ್ಗಳಿದ್ದು, ಅವುಗಳ ಸಂಖ್ಯೆ ಮುಂದಿನ ದಿನಗಳಲ್ಲಿ ಹೆಚ್ಚಾಗಬೇಕು. ಅಭಿವೃದ್ಧಿಯೇ ನಮ್ಮ ಮೊದಲ ಗುರಿ. ಫುಡ್ ಪಾರ್ಕ್ಗಳ ಅಭಿವೃದ್ಧಿ ಹಾಗೂ ಉದ್ದೇಶಗಳ ಈಡೇರಿಕೆಗೆ ಸರ್ಕಾರ ಫುಡ್ ಪಾರ್ಕ್ ಗಳ ಹಿಂದೆ ಶಕ್ತಿಯಾಗಿ ಬೆಂಬಲಿಸಲಿದೆ ಎಂದು ಫುಡ್ ಕರ್ನಾಟಕ ಲಿಮಿಟೆಡ್ ಅಧ್ಯಕ್ಷ, ಕೃಷಿ ಸಚಿವ ಬಿ.ಸಿ.ಪಾಟೀಲ್ ಸಹಾಯ ಹಸ್ತ ನೀಡಿದರು.

ರಾಜ್ಯದಲ್ಲಿ ಫುಡ್ ಕರ್ನಾಟಕ ಲಿಮಿಟೆಡ್ ಸಂಸ್ಥೆಯನ್ನು ಬಲವರ್ಧನೆಗೆ ರೂಪಿತಗೊಂಡಿರುವ “ಫುಡ್ ಪಾರ್ಕ್”ಗಳ ಪುನಶ್ಚೇತನ ಸಂಬಂಧ ವಿಕಾಸಸೌಧದ ಸಮ್ಮೇಳನ ಸಭಾಂಗಣದಲ್ಲಿ ‘ಫುಡ್ ಕರ್ನಾಟಕ ಲಿಮಿಟೆಡ್’ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ರಾಜ್ಯದ ನಾಲ್ಕು ಫುಡ್ ಪಾರ್ಕ್ ಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದರು.

ಕೇಂದ್ರದ ಆತ್ಮನಿರ್ಭರ್ ಯೋಜನೆಯಲ್ಲಿ “ಫುಡ್ ಪಾರ್ಕ್ ಗೆ” 4 ಸಾವಿರ ಕೋಟಿ ರೂ.ಅನುದಾನ ಒದಗಿಸಲಾಗಿದೆ. ಅನುದಾನದ ಉದ್ದೇಶ ಸಫಲವಾಗಬೇಕು. ಲಾಕ್ಡೌನ್ ಆದ ಸಂದರ್ಭದಲ್ಲಿ ರೈತರ ಆರ್ಥಿಕ ಪರಿಸ್ಥಿತಿ ನಿಭಾಯಿಸಲು “ಆಹಾರ ಉತ್ಪಾದನಾ ಘಟಕ’ಗಳು ಸಹಾಯಕವಾಗಲಿದೆ ಎಂದರು.

ಏನಿದು ಫುಡ್ ಪಾರ್ಕ್:

10 ನೇ ಪಂಚವಾರ್ಷಿಕ ಯೋಜನೆಯಡಿಯಲ್ಲಿ ಕೇಂದ್ರ ಸರ್ಕಾರದ ಆಹಾರ ಸಂಸ್ಕರಣಾ ಸಚಿವಾಲಯ ರಾಜ್ಯದಲ್ಲಿ ಕೋಲಾರ, ಹಿರಿಯೂರು, ಬಾಗಲಕೋಟೆ, ಜೇವರ್ಗಿ ಗಳಲ್ಲಿ ಫುಡ್ ಪಾರ್ಕ್ ಗಳ ಸ್ಥಾಪನೆಗೆ ಅನುಮೋದನೆ ನೀಡಿದ್ದು, ಈ ಪಾರ್ಕ್ ಗಳ ಸ್ಥಾಪನಾ ಕಾರ್ಯದ ಉಸ್ತುವಾರಿ ಸಂಸ್ಥೆಯಾಗಿ ಆಹಾರ ಕರ್ನಾಟಕ ನಿಯಮಿತ ನೋಡಲ್ ಏಜೆನ್ಸಿಯಾಗಿ ಕಾರ್ಯನಿರ್ವಹಿಸುತ್ತಿದೆ.
ರಾಜ್ಯದಲ್ಲಿ 2003 ರಲ್ಲಿ ಮಾಲೂರಿನಲ್ಲಿ “ಇನ್ನೋವಾ ಅಗ್ರಿ ಬಯೋಪಾರ್ಕ್”, ಬಾಗಲಕೋಟೆಯಲ್ಲಿ “ಗ್ರೀನ್ ಫುಡ್ ಪಾರ್ಕ್”, ಹಿರಿಯೂರಿನಲ್ಲಿ “ಅಕ್ಷಯ ಆಹಾರ ಪಾರ್ಕ್ ನಿಯಮಿತ” ಜೇವರ್ಗಿಯಲ್ಲಿ “ಜೇವರ್ಗಿ ಫುಡ್ ಪಾರ್ಕ್ ನಿಯಮಿತ” ಕಾರ್ಯನಿರ್ವಹಿಸುತ್ತಿವೆ.

ಫ್ರೆಶ್ ನ್ಯೂಸ್

Latest Posts

Featured Videos