ಬೆಂಗಳೂರು: ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದ ಮೊದಲ ದಿನದಂದು ಇಂಗ್ಲೆಂಡ್ ತಂಡವು ಟೀಮ್ ಇಂಡಿಯಾದ ಬೌಲರ್ಗಳ ಎದುರು ತತ್ತರಿಸಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಳ್ಳುವ ಮೂಲಕ ಬೃಹತ್ ಮೊತ್ತವನ್ನು ದಾಖಲಿಸುವ ನಿರೀಕ್ಷೆಯಲ್ಲಿದ್ದ ಇಂಗ್ಲೆಂಡ್ ತಂಡಕ್ಕೆ ಟೀಮ್ ಇಂಡಿಯಾದ ಬೌಲರ್ ಗಳು ಶಾಕ್ ನೀಡಿದ್ದಾರೆ.ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ ತಂಡವು ಭಾರತೀಯ ಸ್ಪಿನ್ನರ್ ಗಳ ಮಾರಕ ಬೌಲಿಂಗ್ ದಾಳಿಗೆ ಸಿಕ್ಕು ಕೇವಲ 246 ರನ್ ಗಳಿಗೆ ಆಲೌಟ್ ಆಯಿತು.
ಇಂಗ್ಲೆಂಡ್ ತಂಡದ ಪರವಾಗಿ ಬೆನ್ ಸ್ಟೋಕ್ಸ್ 70 ರನ್ ಗಳಿಸಿದ್ದು ಬಿಟ್ಟರೆ ಉಳಿದ ಯಾವ ಆಟಗಾರನು ಕೂಡ 40 ರ ಗಡಿ ದಾಟಲಿಲ್ಲ.ಭಾರತದ ಪರವಾಗಿ ಜಡೇಜಾ ಮತ್ತು ಆಶ್ವಿನ್ ಕ್ರಮವಾಗಿ ತಲಾ ಮೂರು ವಿಕೆಟ್ ಗಳನ್ನು ಪಡೆಯುವ ಮೂಲಕ ಇಂಗ್ಲೆಂಡ್ ತಂಡದ ಬ್ಯಾಟಿಂಗ್ ಬೆನ್ನೆಲುಬು ಮುರಿದರು.