ಭಾರತ ಹಾಗೂ ಇಂಗ್ಲೆಂಡ್‌ 2ನೇ ಟೆಸ್ಟ್​ನಿಂದ ಹೊರಬಿದ್ದ ಸ್ಟಾರ್‌ ಆಟಗಾರರು!

ಭಾರತ ಹಾಗೂ ಇಂಗ್ಲೆಂಡ್‌ 2ನೇ ಟೆಸ್ಟ್​ನಿಂದ ಹೊರಬಿದ್ದ ಸ್ಟಾರ್‌ ಆಟಗಾರರು!

ಬೆಂಗಳೂರು: 2ನೇ ಪಂದ್ಯದಲ್ಲಿ ಸ್ಟಾರ್ ಪ್ಲೇಯರ್ ಆಡುವುದು ಅನುಮಾನ ಶುರುವಾಗಿದೆ. ನಿನ್ನೆ ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ಮುಕ್ತಾಯಗೊಂಡ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡದ ಪ್ರವಾಸಿ ಇಂಗ್ಲೆಂಡ್ ತಂಡವು 28 ರನ್‌ಗಳ ರೋಚಕ ಗೆಲುವು ಸಾಧಿಸಿತು.

ಈ ಮೂಲಕ ಇಂಗ್ಲೆಂಡ್ ತಂಡವು ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-0 ಅಂತರದ ಮುನ್ನಡೆ ಕಾಯ್ದುಕೊಂಡಿದೆ. ತವರಿನಲ್ಲಿ ಮುಖಭಂಗ ಅನುಭವಿಸಿದ ಭಾರತ ತಂಡಕ್ಕೆ ಮುಂದಿನ ಪಂದ್ಯಗಳು ಕಠಿಣವಾಗಿರಲಿವೆ.

ಇದೇ ವೇಳೆ ಭಾರತ ತಂಡಕ್ಕೆ ಸೋಲಿನ ಗಾಯದ ಮೇಲೆ ಬರೆ ಎಳೆದಂತಾಗಿದ್ದು, ಸ್ಟಾರ್ ಆಲ್‌ರೌಂಡರ್ ಗಾಯಕ್ಕೆ ತುತ್ತಾಗಿದ್ದಾರೆ. ಹೀಗಾಗಿ ಎರಡನೇ ಟೆಸ್ಟ್ ಪಂದ್ಯದಲ್ಲಿ ಆಡುವುದು ಅನುಮಾನವೆನಿಸಿದೆ.

ಟೀಂ ಇಂಡಿಯಾಕ್ಕೆ ಇದೀಗ ಮತ್ತೊಂದು ಬಿಗ್ ಶಾಕ್ ಎದುರಾಗಿದೆ. ಉಭಯ ತಂಡಗಳ ನಡುವೆ ವಿಶಾಖಪಟ್ಟಣದಲ್ಲಿ ನಡೆಯಲ್ಲಿರುವ ಎರಡನೇ ಟೆಸ್ಟ್ ಪಂದ್ಯದಿಂದ ತಂಡದ ಇಬ್ಬರು ಸ್ಟಾರ್ ಆಟಗಾರರಾದ ರವೀಂದ್ರ ಜಡೇಜಾ ಹಾಗೂ ಕೆಎಲ್ ರಾಹುಲ್ ಹೊರಬಿದ್ದಿದ್ದಾರೆ.

ಸ್ವತಃ ಈ ವಿಚಾರವನ್ನು ಬಿಸಿಸಿಐ ತನ್ನ ಅಧಿಕೃತ ಏಕ್ಸ್​ ಖಾತೆಯಲ್ಲಿ ಹಂಚಿಕೊಂಡಿದೆ. ಮೊದಲ ಟೆಸ್ಟ್ ಪಂದ್ಯದ ವೇಳೆ ಇಂಜುರಿಗೊಳಗಾಗಿದ್ದ ರವೀಂದ್ರ ಜಡೇಜಾ ಹಾಗೂ ಕೆಎಲ್ ರಾಹುಲ್ ಎರಡನೇ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದಾರೆ ಎಂದು ಬಿಸಿಸಿಐ ಮಾಹಿತಿ ನೀಡಿದೆ.

ಫ್ರೆಶ್ ನ್ಯೂಸ್

Latest Posts

Featured Videos