ಮೂರು ಟೆಸ್ಟ್​ಗಳಿಂದ ಕೂಡ ಹಿಂದೆ ಸರಿದ ಕೊಹ್ಲಿ!

ಮೂರು ಟೆಸ್ಟ್​ಗಳಿಂದ ಕೂಡ ಹಿಂದೆ ಸರಿದ ಕೊಹ್ಲಿ!

ಬೆಂಗಳೂರು: ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿ ಉಳಿದಿರುವ ಮೂರು ಪಂದ್ಯಗಳಲ್ಲಿ ಭಾರತದ ಮಾಜಿ ನಾಯಕ ವಿರಾಟ್ ಕೊಹ್ಲಿ ಹಿಂದಿ ಸರಿಯುತ್ತಿರುವುದಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಮತ್ತು ಹಿರಿಯ ರಾಷ್ಟ್ರೀಯ ಆಯ್ಕೆ ಸಮಿತಿ ಮಾಹಿತಿ ನೀಡಿದ್ದಾರೆ.

ವಿರಾಟ್ ತಮ್ಮ ವೃತ್ತಿಜೀವನದಲ್ಲಿ ಇದೇ ಮೊದಲ ಬಾರಿಗೆ ತವರಿನಲ್ಲಿ ಸಂಪೂರ್ಣ ಟೆಸ್ಟ್ ಸರಣಿಯನ್ನು ಕಳೆದುಕೊಳ್ಳುತ್ತಿರುವುದು. ಕೊಹ್ಲಿ ಹೊರತಾಗಿ, ಮಧ್ಯಮ ಕ್ರಮಾಂಕದ ಬ್ಯಾಟರ್ ಶ್ರೇಯಸ್ ಅಯ್ಯರ್ ಕೂಡ ಇಂಗ್ಲೆಂಡ್ ವಿರುದ್ಧದ ಕೊನೆಯ ಮೂರು ಟೆಸ್ಟ್ ಪಂದ್ಯಗಳಿಂದ ಹೊರಬಿದ್ದಿದ್ದಾರೆ. ಎರಡನೇ ಟೆಸ್ಟ್‌ನಲ್ಲಿ ಭಾರತದ ಪರ 4ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ್ದ ಅಯ್ಯರ್ ಗಾಯದ ಕಾರಣದಿಂದ ಹೊರಗುಳಿದಿದ್ದಾರೆ.

ಅಯ್ಯರ್ ಮತ್ತು ಕೊಹ್ಲಿ ಅನುಪಸ್ಥಿತಿಯು ಭಾರತಕ್ಕೆ ದೊಡ್ಡ ಹಿನ್ನಡೆಯಾಗಲಿದೆ. ಆದರೆ ಕೆಲವು ಒಳ್ಳೆಯ ಸುದ್ದಿಯೂ ಇದೆ. ಗಾಯದಿಂದಾಗಿ ಎರಡನೇ ಟೆಸ್ಟ್‌ನಿಂದ ಹೊರಗುಳಿದಿದ್ದ ರವೀಂದ್ರ ಜಡೇಜಾ ಮತ್ತು ಕೆಎಲ್ ರಾಹುಲ್ ಅವರು ಫಿಟ್‌ ಆಗಿದ್ದಾರೆ. ಫೆಬ್ರವರಿ 15 ರಂದು ಪ್ರಾರಂಭವಾಗುವ ಮೂರನೇ ಟೆಸ್ಟ್‌ನಲ್ಲಿ ಇವರಿಬ್ಬರು ಕಾಣಿಸಿಕೊಳ್ಳಲಿದ್ದಾರೆ.

 

 

ಫ್ರೆಶ್ ನ್ಯೂಸ್

Latest Posts

Featured Videos