ಮಂಡ್ಯ ಏ. 15, ನ್ಯೂಸ್ ಎಕ್ಸ್ ಪ್ರೆಸ್: 2019ರ ಲೋಕಸಭಾ ಚುನಾವಣೆಯ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ದಿನದಿಂದ ದಿನಕ್ಕೆರಂಗು ರಗೇರುತ್ತಿದೆ. ಹೌದು, ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಪರ ನಟ ದರ್ಶನ್ ಇಂದು ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ.
ಮಂಡ್ಯ ಜಿಲ್ಲೆಯ ಪಾಂಡವಪುರ ಕ್ಷೇತ್ರದಲ್ಲಿ ದರ್ಶನ್ ಪ್ರಚಾರ ಮಾಡುತ್ತಿದ್ದು, ದರ್ಶನ್ ಪುಟ್ಟಣ್ಣಯ್ಯ ಸಾಥ್ ನೀಡಿದ್ದಾರೆ. ದರ್ಶನ್ ಹಾಗೂ ಪುಟ್ಟಣ್ಣಯ್ಯ ಪಾಂಡವಪುರ ತಾಲೂಕಿನ ಅರಳೆಕುಪ್ಪೆ, ಕ್ಯಾತನಹಳ್ಳಿ, ಚಿಕ್ಕಾಡೆ ಸೇರಿದಂತೆ 20 ಹಳ್ಳಿಗಳಲ್ಲಿ ಸುಮಲತಾ ಪರ ಪ್ರಚಾರ ನಡೆಸಲಿದ್ದಾರೆ.
ಇನ್ನು ನಟ ಯಶ್ ಅವರು ಇಂದು ಚಂದಗಾಲು, ಆನಸೊಸಲು, ಎಸ್ ಐ ಕೋಡಿಹಳ್ಳಿಯಲ್ಲಿ ಪ್ರಚಾರ ನಡೆಸಲಿದ್ದು, ಯಶ್ ಗೆ ಸ್ಥಳೀಯ ಕಾಂಗ್ರೆಸ್, ಬಿಜೆಪಿ ಮುಖಂಡರು ಸಾಥ್ ನೀಡಲಿದ್ದಾರೆ.