ತಾಜಾ ಸುದ್ದಿಗಳು

  • ಭಾನು ಮುಷ್ತಾಕ್ ಗೆ ಭೂಕರ್ ಪ್ರಶಸ್ತಿ

    ಬೆಂಗಳೂರು: ಲೇಖಕಿ, ಪತ್ರಕರ್ತೆ, ಕತೆಗಾರ್ತಿ ಭಾನು ಮುಷ್ತಾಕ್ ಅವರಿಗೆ ಅಂತಾರಾಷ್ಟ್ರೀಯ ಭೂಕರ್ ಪ್ರಶಸ್ತಿ ಲಭಿಸಿರುವುದು ಅವರ ಕತೆಗಳಲ್ಲಿ ಬೆಸೆದಿರುವ ಭಾರತೀಯತೆಯ ಬೆಸುಗೆಗೆ ಸಿಕ್ಕಿರುವ ಅಂತಾರಾಷ್ಟ್ರೀಯ ಮನ್ನಣೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಸಂತಸ ವ್ಯಕ್ತಪಡಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಇಂದು (ಬುಧವಾರ ಮೇ 21) ರಂದು ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಪುಣ್ಯಸ್ಮರಣೆಯ ಸಂದರ್ಭದಲ್ಲಿ ಮಾತನಾಡಿದ ಅವರು, ಭಾನು ಮುಷ್ತಾಕ್ ಅವರು ತಮ್ಮ ಲೇಖನ, ಭಾಷಣ ಮತ್ತು ಕತೆಗಳಲ್ಲಿ ನಮ್ಮ‌ ನೆಲದ ಮೂಲ ಸತ್ವ ಮತ್ತು

    READ MORE
  • ಸುಳ್ಳು ವಿಚಾರಗಳ ಆಧರಿಸಿಯೇ ಬಿಜೆಪಿ ಹೋರಾಟ

    ಮೈಸೂರು: ಚಾಮುಂಡೇಶ್ವರಿ ತಾಯಿಗೆ ಪುಷ್ಪಾರ್ಚನೆ ಮಾಡುವ ಸೌಭಾಗ್ಯವನ್ನು ರಾಜ್ಯದ ಜನ ಹಲವು ಬಾರಿ ಒದಗಿಸಿಕೊಟ್ಟಿದ್ದಾರೆ. ತಾಯಿಯ ಆಶೀರ್ವಾದ ನನ್ನ ಮೇಲೆ ಸದಾ ಇರುವ ಕಾರಣದಿಂದಲೇ ದೀರ್ಘಕಾಲದಿಂದ ರಾಜಕೀಯದಲ್ಲಿ ಇರಲು ಸಾಧ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ರಾಜ್ಯದ ಜನತೆಗೆ ದಸರೆಯ ಶುಭ ಕೋರಿದ ಮುಖ್ಯಮಂತ್ರಿಗಳು, ನಾಳೆ ಮೈಸೂರಿನಲ್ಲಿ ನಡೆಯುವ ಜಂಬೂಸವಾರಿ ಸೇರಿದಂತೆ ಹಲವು ಕಾರ್ಯಕ್ರಮಗಳ ಬಗ್ಗೆ ತಿಳಿಸಿದರು.ರಾಜಕೀಯದಲ್ಲಿ ತೆಗಳುವವರು, ಹೊಗಳುವವರು ಇರುತ್ತಾರೆ. ಶತ್ರುಗಳೂ , ಅಭಿಮಾನಿಗಳೂ ಇರುತ್ತಾರೆ.

    READ MORE
  • ಮತ್ತೆ ತೆರಿಗೆ ಅನ್ಯಾಯ; ಕನ್ನಡಿಗರನ್ನು ಕೆಣಕುತ್ತಿರುವ ಕೇಂದ್ರ ಸರಕಾರ: ಡಿ.ಕೆ.ಸುರೇಶ್ ಆಕ್ರೋಶ

    ಬೆಂಗಳೂರು: “ಪದೇ, ಪದೇ ಕರ್ನಾಟಕ ಹಾಗೂ ದಕ್ಷಿಣ ಭಾರತದ ರಾಜ್ಯಗಳಿಗೆ ತೆರಿಗೆ ಪಾಲಿನಲ್ಲಿ ಮೋಸವಾಗುತ್ತಿದೆ. ಕನ್ನಡಿಗರು ಹಾಗೂ ದಕ್ಷಿಣ ಭಾರತೀಯರ ಮನಸ್ಸನ್ನು ಕೇಂದ್ರ ಸರ್ಕಾರ ಕೆಣಕುತ್ತಿದೆ” ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಕಿಡಿಕಾರಿದರು. ರಾಜ್ಯಗಳಿಗೆ ತೆರಿಗೆ ಹಂಚಿಕೆ ಬಗ್ಗೆ ಕೇಂದ್ರ ಸರ್ಕಾರ ಗುರುವಾರ ಬಿಡುಗಡೆ ಮಾಡಿದ ಪಟ್ಟಿಯ ಬಗ್ಗೆ ಮಾಧ್ಯಮದವರು ಸದಾಶಿವನಗರ ನಿವಾಸದ ಬಳಿ ಶುಕ್ರವಾರ ಕೇಳಿದಾಗ ಸುರೇಶ್ ಅವರು ಹೀಗೆ ಉತ್ತರಿಸಿದರು. “ಕನ್ನಡಿಗರಿಗೆ ಆಗುತ್ತಿರುವ ಮೋಸವನ್ನು ಬಹಳ ದುಃಖದಿಂದ ಹೇಳುತ್ತಿದ್ದೇನೆ. ದೇಶದಲ್ಲಿಯೇ ಅತ್ಯಂತ ಹೆಚ್ಚು ತೆರಿಗೆ

    READ MORE
  • ಸ್ವಚ್ಛ ಭಾರತ ದಿನಾಚರಣೆ

    ಬೆಂಗಳೂರು: ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 02 ರ ವರೆಗೆ ‘ಸ್ವಚ್ಛತಾ ಹೀ ಸೇವಾ ಪಾಕ್ಷಿಕ-2024 ಆಂದೋಲನ’ ಹಮ್ಮಿಕೊಳ್ಳಲಾಗಿದ್ದು ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಜಿಲ್ಲಾಡಳಿತ ಭವನದ ಆವರಣದಲ್ಲಿ ಆಯೋಜಿಸಲಾಗಿದ್ದ ಸ್ವಚ್ಛ ಭಾರತ ದಿನಾಚರಣೆಗೆ ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಕಸವನ್ನು ಸ್ವಚ್ಚಗೊಳಿಸಿ ಸಸಿ ನೆಡುವ  ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಟಿ.ಕೆ ರಮೇಶ್

    READ MORE
  • ಬಿಜೆಪಿ ಸೇರ್ಪಡೆಯಾದ ಮಾಜಿ ಆಟಗಾರ ಕಿಕೆಟಿಗ ದೊಡ್ಡ ಗಣೇಶ್‌

    ಬೆಂಗಳೂರು: ಈ ಬಾರಿ ಲೋಕಸಭಾ  ಚುನಾವಣೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿದ್ದು ಮಂಡ್ಯ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಜಯಭೇರಿ ಸಾಧಿಸಿದಂತಹ ಮಾಜಿ ಸಂಸದ ಸುಮಲತಾ ಅಂಬರೀಶ್ ಅವರು ಇಂದು ಬೆಳಿಗ್ಗೆ 12 ಗಂಟೆಗೆ ಬಿಜೆಪಿ ಪಕ್ಷವನ್ನು ಸೇರಿಕೊಂಡರು, ಈ ಸಂದರ್ಭದಲ್ಲಿ ಮಾಜಿ ಕ್ರಿಕೆಟಿಗ ದೊಡ್ಡ ಗಣೇಶ್ ಅವರು ಕೂಡ ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ. ಬಿಎಸ್​ ಯಡಿಯೂರಪ್ಪ, ಪಕ್ಷದ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸಮ್ಮುಖದಲ್ಲಿ ಕ್ರಿಕೆಟಿಗ ದೊಡ್ಡ ಗಣೇಶ ಮತ್ತು ಕೊಪ್ಪಳ ಮಾಜಿ ಸಂಸದ ಶಿವರಾಮಗೌಡ

    READ MORE
  • ಮೊದಲ ಅರ್ಧಶತಕ ಸಿಡಿಸಿದ ಗಿಲ್

    ಬೆಂಗಳೂರು: 17 ನೇ ಆವೃತ್ತಿ ಐಪಿಎಲ್ ನಲ್ಲಿ ನಿನ್ನೆ ನಡೆದ 17ನೇ ಪದ್ಯದಲ್ಲಿ  ಪಂಜಾಬ್ ಕಿಂಗ್ಸ್ ಹಾಗೂ ಗುಜರಾತ್ ಟೈಟನ್ ತಂಡಗಳು ಮುಖಾಮುಖಿಯಾಗಿತ್ತು.ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದಿದ್ದ ಪಂಜಾಬ್ ಕಿಂಗ್ಸ್ ವಿರುದ್ಧದ ಐಪಿಎಲ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ನಾಯಕ ಶುಭ್​ಮನ್ ಗಿಲ್ ಈ ಸೀಸನ್​ನ ಮೊದಲ ಅರ್ಧಶತಕ ಸಿಡಿಸಿದ್ದಾರೆ. ಗಿಲ್​ಗೆ ಈ ಅರ್ಧಶತಕ ಹಲವು ರೀತಿಯಲ್ಲಿ ವಿಶೇಷವಾಗಿತ್ತು. ಇದು ನಾಯಕನಾಗಿ ಶುಭ್‌ಮನ್‌ ಅವರ ಮೊದಲ ಅರ್ಧಶತಕವಾಗದ್ದರೆ, ಈ ಸೀಸನ್​ನಲ್ಲಿ ಅರ್ಧಶತಕ ಬಾರಿಸಿದ ಗುಜರಾತ್‌ನ ಮೊದಲ ಬ್ಯಾಟ್ಸ್‌ಮನ್

    READ MORE
  • ಇಂದು CSK vs SRH ಮುಖಾಮುಖಿ

    ಬೆಂಗಳೂರು: ಐಪಿಎಲ್ 2024 ರ 18ನೇ ಪಂದ್ಯವು ಸನ್ ರೈಸರ್ಸ್ ಹೈದರಾಬಾದ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ಇಂದು ಹೈದರಾಬಾದ್‌’ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ. ಚೆನ್ನೈ ಸೂಪರ್ ಕಿಂಗ್ಸ್ ಪ್ರಸ್ತುತ ಮೂರು ಪಂದ್ಯಗಳಲ್ಲಿ ಎರಡು ಗೆಲುವುಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. SRH ಮೂರು ಪಂದ್ಯಗಳಿಂದ ಕೇವಲ ಒಂದು ಗೆಲುವಿನೊಂದಿಗೆ ಏಳನೇ ಸ್ಥಾನದಲ್ಲಿದೆ. ಸನ್‌ರೈಸರ್ಸ್ ಹೈದರಾಬಾದ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಐಪಿಎಲ್‌’ನಲ್ಲಿ ಇದುವರೆಗೆ 20 ಬಾರಿ ಮುಖಾಮುಖಿಯಾಗಿದ್ದು, ಸಿಎಸ್‌ಕೆ ಮೇಲುಗೈ ಸಾಧಿಸಿದೆ.

    READ MORE

ತಾಜಾ ಸುದ್ದಿಗಳು

ಕ್ರೀಡೆ

ಚಲನಚಿತ್ರ

ಹಣಕಾಸು