ತಾಜಾ ಸುದ್ದಿಗಳು

  • ಇಂದು RCB vs KKR ಮುಖಾಮುಖಿ

    ಬೆಂಗಳೂರು: ಇಂದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೋಲ್ಕತ್ತಾ ನಡುವೆ ಐಪಿಎಲ್ 2024ರ 10ನೇ ಪಂದ್ಯದಲ್ಲಿ ಮುಖಾಮುಖಿಯಾಗಲಿದ್ದಾರೆ. ಮೊದಲ ಪಂದ್ಯದಲ್ಲಿ ಸೋಲುಂಡ ಬಳಿಕ ಪಂಜಾಬ್ ವಿರುದ್ಧ ಗೆದ್ದಿರುವ ಆರ್​ಸಿಬಿ ತವರಿನಲ್ಲಿ ಮತ್ತೊಂದು ಜಯ ಸಾಧಿಸುವ ಹಂಬಲದಲ್ಲಿದೆ. ಇನ್ನೊಂದೆಡೆ KKR ಐಪಿಎಲ್ 2024 ರ ತನ್ನ ಮೊದಲ ಪಂದ್ಯವನ್ನು ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ತವರಿನಲ್ಲಿ ಗೆದ್ದಿದೆ. ಒಟ್ಟಾರೆಯಾಗಿ ಈ ಪಂದ್ಯದಲ್ಲಿ ಅಭಿಮಾನಿಗಳ ಕಣ್ಣು ವಿರಾಟ್ ಕೊಹ್ಲಿ ಹಾಗೂ ಆಂಡ್ರೆ ರಸೆಲ್ ಮೇಲಿದ್ದು, ಈ ಇಬ್ಬರೂ ಆಟಗಾರರು

    READ MORE
  • ಡೆಲ್ಲಿ ಉಡೀಸ್‌ ಕಪ್‌ ಗೆದ್ದಾ RCB ಲೇಡೀಸ್

    ಬೆಂಗಳೂರು: ದೆಹಲಿಯ ಆರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ WPL ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಂತಿಮವಾಗಿ ಡೆಲ್ಲಿ ಕ್ಯಾಪಿಟಲ್ ವಿರುದ್ಧ 8 ವಿಕೆಟ್ ಗಳಿಂದ ಅದ್ಭುತ ಗೆಲುವು ಸಾಧಿಸುವ ಮೂಲಕ ತಮ್ಮ ಚೊಚ್ಚಲ ಪ್ರಶಸ್ತಿ ಮುಡಿಗೇರಿಸಿಕೊಂಡಿದೆ. ಈ ಕ್ಷಣ… ಇದೊಂದು ಕ್ಷಣಕ್ಕಾಗಿ ಆರ್​ಸಿಬಿ ಅಭಿಮಾನಿಗಳು ಕಾಯ್ದಿದ್ದು ಬರೋಬ್ಬರಿ 17 ವರ್ಷಗಳು. ಪ್ರತಿ ಆವೃತ್ತಿಯಲ್ಲೂ ಬೆಟ್ಟದಷ್ಟು ನಿರೀಕ್ಷೆ ಇಟ್ಟು ಕಾಯುತ್ತಿದ್ದ ಆರ್​ಸಿಬಿ ಅಭಿಮಾನಿಗಳಿಗೆ ಕೊನೆಗೆ ಎದುರಾಗುತ್ತಿದ್ದಿದ್ದು, ಸೋಲಿನ ನಿರಾಸೆ. ಕಳೆದ 16 ಆವೃತ್ತಿಗಳಲ್ಲಿ ಆರ್​ಸಿಬಿ 4 ಬಾರಿ

    READ MORE
  • ಇಂದು MI ಹಾಗೂ RCB ಮುಖಾಮುಖಿ

    ಬೆಂಗಳೂರು: ಮಹಿಳಾ ಪ್ರೀಮಿಯರ್ ಲೀಗ್‌ನ ಎರಡನೇ ಸೀಸನ್‌ನ ಎಲಿಮಿನೇಟರ್ ಪಂದ್ಯ ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ಇಂದು ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆಯಲಿದೆ. ಹರ್ಮನ್‌ಪ್ರೀತ್ ಕೌರ್ ನೇತೃತ್ವದ ಮುಂಬೈ ತಂಡವು ಈ ಸೀಸನ್​ನಲ್ಲಿ ಎರಡನೇ ಸ್ಥಾನ ಗಳಿಸಿದರೆ ಆರ್​ಸಿಬಿ ಮೂರನೇ ಸ್ಥಾನ ಗಳಿಸಿತು. ಬುಧವಾರ ಸಂಜೆ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಗುಜರಾತ್ ಜೈಂಟ್ಸ್ ನಡುವೆ ನಡೆದ ಪಂದ್ಯದಲ್ಲಿ ಮೆಗ್ ಲ್ಯಾನಿಂಗ್ ನೇತೃತ್ವದ ಡೆಲ್ಲಿ ತಂಡ ಮತ್ತೊಮ್ಮೆ ಗೆದ್ದು ಫೈನಲ್ ತಲುಪಿದ ಮೊದಲ

    READ MORE
  • IPL 17ನೇ ಆವೃತ್ತಿಯ ಪ್ರೋಮೋ ಬಿಡುಗಡೆ!

    ಬೆಂಗಳೂರು: ಇಂಡಿಯಾ ಪ್ರೀಮಿಯರ್ ಲೀಗ್-ಐಪಿಎಲ್‌ಗೆ ದಿನಗಣನೆ ಆರಂಭವಾಗಿದೆ. ಚಟುಕು ಕ್ರಿಕೆಟ್ ಸಮರ ಮಾರ್ಚ್ 22 ರಿಂದ ಆರಂಭವಾಗುತ್ತಿದೆ. ಟೂರ್ನಿಯ ಸಂಪೂರ್ಣ ವೇಳಾಪಟ್ಟಿ ಪ್ರಕಟವಾಗಿಲ್ಲ. ಇದರ ನಡುವೆಯೇ ಮಾಧ್ಯಮ ಪ್ರಸಾರದ ಅಧಿಕೃತ ಹಕ್ಕು ಪಡೆದಿರುವ ಸ್ಟಾರ್ ಸ್ಪೋರ್ಟ್ಸ್ ಐಪಿಎಲ್ 2024ರ ಮೊದಲ ಪ್ರೋಮೋವನ್ನು ಬಿಡುಗಡೆಯಾಗಿದೆ. ರಿಷಭ್ ಪಂತ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ ಹಾಗೂ ಹಾರ್ದಿಕ್ ಪಾಂಡ್ಯ ಅವರನ್ನು ಹೈಲೈಟ್ಸ್ ಮಾಡಲಾಗಿದ್ದು, ಹಿಂದೆಂದೂ ಈ ಸ್ಟಾರ್ ಆಟಗಾರರು ಈ ರೀತಿ ಕಾಣಿಸಿಕೊಂಡಿಲ್ಲ. ಗಾಯದ ಸಮಸ್ಯೆ ಸೇರಿದಂತೆ ಹಲವು ಕಾರಣಗಳಿಂದ

    READ MORE
  • PBKS ವಿರುದ್ದ GT ತಂಡಕ್ಕೆ ಭರ್ಜರಿ ಜಯ

    ಬೆಂಗಳೂರು: ನಿನ್ನೆ ಚಂಡೀಗಢದ ಮಹಾರಾಜ ಯಾದವೀಂದ್ರ ಸಿಂಗ್ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ 37ನೇ ಪಂದ್ಯದಲ್ಲಿ ಪಂಜಾಬ್‌ ಕಿಂಗ್ಸ್ ತಂಡದ ವಿರುದ್ಧ ಗುಜರಾತ್‌ ಟೈಟನ್ಸ್ ತಂಡ ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿತು. ಈ ಮೂಲಕ ಗುಜರಾತ್‌ ಟೈಟನ್ಸ್ ತಂಡವು ಐಪಿಎಲ್ 2024ರಲ್ಲಿ ಆಡಿದ 8 ಪಂದ್ಯಗಳಲ್ಲಿ 4 ಗೆಲುವು ಮತ್ತು 4 ಸೋಲು ಕಂಡಿದ್ದು, 6 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ 6ನೇ ಸ್ಥಾನಕ್ಕೆ ಜಿಗಿದಿದೆ. ಇನ್ನು ಪಂಜಾಬ್ ಕಿಂಗ್ಸ್ ತಂಡ ಆಡಿದ 8 ಪಂದ್ಯಗಳಲ್ಲಿ

    READ MORE
  • ಕೊಹ್ಲಿ ಔಟ್ ವಿವಾದ: ಕಿಡಿಕಾರಿದ ಎಬಿಡಿ

    ಬೆಂಗಳೂರು: ನಿನ್ನೆ ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆದ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ನಡುವಿನ ರೋಚಕ ಪಂದ್ಯದ ವೇಳೆ ವಿರಾಟ್ ಕೊಹ್ಲಿ ವಿವಾದಾತ್ಮಕವಾಗಿ ಔಟಾದ ನಂತರ ಆರ್‌ಸಿಬಿ ಮಾಜಿ ಆಟಗಾರ ಎಬಿ ಡಿವಿಲಿಯರ್ಸ್ ತಮ್ಮ ಟೀಕೆಗಳನ್ನು ಮುಂದಿಟ್ಟಿದ್ದಾರೆ. ಆರ್‌ಸಿಬಿ ರನ್-ಚೇಸ್ ಸಮಯದಲ್ಲಿ ಹರ್ಷಿತ್ ರಾಣಾ ಫುಲ್ ಟಾಸ್ ಬೌಲ್ ಮಾಡಿದರು ಮತ್ತು ವಿರಾಟ್ ಕೊಹ್ಲಿ ಬೌಲರ್‌ಗೆ ಸುಲಭವಾಗಿ ರಿಟರ್ನ್ ಕ್ಯಾಚ್ ನೀಡಿದರು. ವಿರಾಟ್ ಕೊಹ್ಲಿ ಔಟ್ ಆದಾಗ ಚೆಂಡು ಕಾನೂನುಬದ್ಧವಾಗಿದೆಯೇ ಅಥವಾ

    READ MORE
  • ಮತ್ತೆ ಮುಗ್ಗರಿಸಿದ RCB

    ಬೆಂಗಳೂರು: ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಿನ್ನೆ ನಡೆದ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ 36ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು ಕೊನೆಯ ಎಸೆತದಲ್ಲಿ 1 ರನ್‌ನಿಂದ ರೋಚಕ ಗೆಲುವು ಸಾಧಿಸಿದೆ. ಈ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ 2024ರಲ್ಲಿ ಸೋಲಿನ ಕೂಪದಿಂದ ಎದ್ದುಬರಲು ಮತ್ತೊಮ್ಮೆ ವಿಫಲವಾಗಿದ್ದು, ಪ್ಲೇಆಫ್ ಹಂತ ತಲುಪುವ ಕನಸು ಬಹುತೇಕ ಅಂತ್ಯಗೊಂಡಂತಾಗಿದೆ. ಆಡಿದ 8 ಪಂದ್ಯಗಳಲ್ಲಿ 7 ಸೋಲು ಮತ್ತು 1 ಗೆಲುವು ಸಾಧಿಸಿದ್ದು,

    READ MORE

ತಾಜಾ ಸುದ್ದಿಗಳು

ಕ್ರೀಡೆ

ಚಲನಚಿತ್ರ

ಹಣಕಾಸು