ಪೋಷಣ್ ಅಭಿಯಾನ ಮಾಸಾಚರಣೆ, ಜಾಗೃತಿ ಕಾರ್ಯಕ್ರಮ

ಪೋಷಣ್ ಅಭಿಯಾನ ಮಾಸಾಚರಣೆ, ಜಾಗೃತಿ ಕಾರ್ಯಕ್ರಮ

ಔರಾದ್: ತಾಲ್ಲೂಕಿನ ಕೌಡಗಾಂವ ಗ್ರಾಮದಲ್ಲಿ ಸರ್ಕಾರಿ ಪ್ರೌಢ ಶಾಲೆಯ ವತಿಯಿಂದ ಪೋಷಣ್ ಅಭಿಯಾನ ಮಾಸಾಚರಣೆ, ಜಾಗೃತಿ ಕಾರ್ಯಕ್ರಮ ತಾಲ್ಲೂಕಾ ಪಂಚಾಯತ್ ಸಹಾಯಕ ನಿರ್ದೇಶಕರು ಸುದೇಶ್ ರವರು ಸಿಸಿ ಕ್ಯಾಮೆರಾ ಉದ್ಘಾಟನೆ, ಹಾಗೂ ಶಿಕ್ಷಣ ಸಂಯೋಜಕರಾದ ಬಲಭೀಮ ಕುಲಕರ್ಣಿಯವರು ಕಂಪ್ಯೂಟರ್ ಕೋಣೆ ಉದ್ಘಾಟನೆ ಮಾಡಿ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಕೌಠಾ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕುಮುದ ಮಾತನಾಡಿ, ‘ಮಗು ಜನಿಸಿದ ಒಂದು ಗಂಟೆಯೊಳಗೆ ತಾಯಿಯ ಎದೆಹಾಲು ನೀಡುವುದನ್ನು ಇತ್ತೀಚಿನ ದಿನಗಳಲ್ಲಿ ಕಡಿಮೆಯಾಗುತ್ತಿದೆ. ಈ ಬಗ್ಗೆ ಎಲ್ಲರೂ ಜಾಗೃತಿ ವಹಿಸಬೇಕು. ಗರ್ಭಿಣಿಯರು, ಬಾಣಂತಿಯರು ಯಾವುದೇ ಕಾರಣಕ್ಕೂ ಅಪೌಷ್ಟಿಕತೆಯಿಂದ ಹಾಗೂ ರಕ್ತಹೀನತೆಯಿಂದ ಬಳಲದಂತೆ ಸದಾ ನಿಗಾವಹಿಸಬೇಕು. ಇದರಿಂದ ಎರಡೂ ಜೀವಗಳು ಅನಾರೋಗ್ಯಕ್ಕೆ ತುತ್ತಾಗುವ ಅಪಾಯಗಳು ಹೆಚ್ಚಾಗಲಿವೆ. ಮನೆಯಂಗಳದಲ್ಲಿ ಕೈತೋಟ ಬೆಳೆಸುವುದು, ಮಕ್ಕಳಿಗೆ ಮೊಟ್ಟೆ, ಮೊಳಕೆ ಕಾಳು ತಿನ್ನಿಸುವುದು. ಈ ಕುರಿತಂತೆ ತಾಯಂದಿರಲ್ಲಿ ಅರಿವು ಮೂಡಿಸಲು ಅಂಗನವಾಡಿ ಕೇಂದ್ರಗಳಲ್ಲಿ ವಿವಿಧ ಕಾರ್ಯಕ್ರಮಗಳು ನಡೆಸಲಾಗುತ್ತಿದೆ’ ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯಗುರುಗಳಾದ ಬಾಲಿಕಾ ಮೆಹಕರೆ ಮತ್ತು ಎಸ್ ಡಿಎಂಸಿ ಅಧ್ಯಕ್ಷರಾದ ಗುರುನಾಥ್ ಪಂಚಾಯತ್ ಸದಸ್ಯರಾದ ಗೌತಮ್ ಹಾಗೂ ಶಿಕ್ಷಕರಾದ ಗೋಪಾಲರೆಡ್ಡಿ, ಸತೀಶ್ ಬಿರಾದಾರ್, ಕೃತಿಕಾ , ವಿಜಯಕುಮಾರ್, ಬಸವರಾಜ್, ಪದ್ಮಾವತಿ, ಜ್ಯೋತಿ ಭಾಗವಹಿಸಿದರು.

ಫ್ರೆಶ್ ನ್ಯೂಸ್

Latest Posts

Featured Videos