ಪಾಕ್​ ನಿಂದ 100 ಉಗ್ರರು?!

ಪಾಕ್​ ನಿಂದ 100 ಉಗ್ರರು?!

ನವದೆಹಲಿ, ಆ. 23 :   ಕಾಶ್ಮೀರ ವಿಶೇಷ ಸ್ಥಾನಮಾನ ರದ್ದುಗೊಂಡ ಹಿನ್ನಲೆ ಕಣಿವೆಯಾದ್ಯಂತ ವ್ಯಾಪಕ ಹಿಂಸಾಚಾರ ನಡೆಸಿ, ಅರಾಜಕತೆ ಸೃಷ್ಟಿಸುವ ಮೂಲಕ  ಪಾಕಿಸ್ತಾನ ಸಜ್ಜಾಗುತ್ತಿದೆ. ಇದಕ್ಕಾಗಿ ಅದು ಅಫ್ಘಾನಿಸ್ತಾನದಲ್ಲಿ ಯುದ್ಧದಲ್ಲಿ ಪಾಲ್ಗೊಂಡು ಅನುಭವ ಹೊಂದಿರುವ 100 ಉಗ್ರರನ್ನು ಭಾರತದೊಳಗೆ ನುಸುಳಿಸಲು ಅದು ಮುಂದಾಗಿದೆ ಎಂದು ಭಾರತೀಯ ಬೇಹುಗಾರಿಕಾ ಪಡೆ ಮಾಹಿತಿ ನೀಡಿದೆ.

ಕಾಶ್ಮೀರ ಕಣಿವೆಯಲ್ಲಿರುವ ಉಗ್ರರಿಗೆ ಸೂಕ್ತವಾದ ತರಬೇತಿ ಇಲ್ಲ. ಜತೆಗೆ ಅಲ್ಲಿ ನಾಯಕತ್ವದ ಕೊರತೆ ಇದೆ. ಈ ಹಿನ್ನೆಲೆಯಲ್ಲಿ ಅಫ್ಘಾನಿಸ್ತಾನ ಮೂಲದ ಉಗ್ರರನ್ನು ಭಾರತದೊಳಗೆ ನುಸುಳಿಸಲು ಪಾಕಿಸ್ತಾನ ಹುನ್ನಾರ ನಡೆಸಿದೆ ಎನ್ನಲಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos