ಪಾಕ್ ಪರ ಘೋಷಣೆ: ಅಮೂಲ್ಯಗೆ 14 ದಿನಗಳ ನ್ಯಾಯಾಂಗ ಬಂಧನ

ಪಾಕ್ ಪರ ಘೋಷಣೆ: ಅಮೂಲ್ಯಗೆ 14 ದಿನಗಳ ನ್ಯಾಯಾಂಗ ಬಂಧನ

ಬೆಂಗಳೂರು, ಫೆ. 21: ನಿನ್ನೆ ಪಾಕಿಸ್ತಾನದ ಪರ ಘೋಷಣೆ ಕೂಗಿದ ಆರೋಪದ ಮೇಲೆ ಅಮೂಲ್ಯ ಲಿಯೋನ್ಳನ್ನು ಪೊಲೀಸರು ತಡರಾತ್ರಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ. 5ನೇ ಎಸಿಎಂಎಂ ನ್ಯಾಯಾಧೀಶೆ ಶಿರಿನೆ ಜೆ. ಅನ್ಸಾರಿ ಆರೋಪಿಯನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಈ ಬಗ್ಗೆ ಪಶ್ಚಿಮ ವಿಭಾಗ ಡಿಸಿಪಿ ರಮೇಶ್ ಬಾನೋತ್ ಸುದ್ದಿಗಾರರೊಂದಿಗೆ ಮಾತನಾಡಿ, ನಿನ್ನೆ ಸಂಜೆ ಸಿಎಎ ವಿರುದ್ಧ ಪ್ರತಿಭಟನೆ ನಡೆಯುತ್ತಿತ್ತು. ಈ ವೇಳೆ ಅಮೂಲ್ಯ ಅನ್ನೋ ಹುಡುಗಿ 3 ಬಾರಿಪಾಕಿಸ್ತಾನದ ಪರ ಘೋಷಣೆ ಕೂಗಿದ್ದಾಳೆ. ನಂತರ ಅಲ್ಲಿರುವ ಪೊಲೀಸರು ಆಕೆಯನ್ನು ತಕ್ಷಣ ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಯನ್ನು ಪ್ರಾಥಮಿಕ ವಿಚಾರಣೆಗೊಳಪಡಿಸಲಾಗಿದೆ ಎಂದರು.

ಆರೋಪಿ ವಿರುದ್ಧ ಸೆಕ್ಷನ್ 124A, 153A, 153B 505/2 34 ಅಡಿಯಲ್ಲಿ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಇದು ಉದ್ದೇಶ ಪೂರ್ವಕವಾಗಿ ಮಾಡಿರುವಂತಿದೆ. ಆರೋಪಿಯ ವಿರುದ್ಧ ಎಫ್ಐಆರ್ ಕೂಡ ದಾಖಲಾಗಿದೆ. ಪ್ರತಿಭಟನೆಯ ಆಯೋಜಕರನ್ನು ತನಿಖೆ ಮಾಡಿ, ಇದರಲ್ಲಿ ಅವರ ಪಾತ್ರ ಕಂಡುಬಂದಲ್ಲಿ ಅವರ ಮೇಲೆ ಕೂಡ ಕೇಸ್ ದಾಖಲಿಸಿಕೊಳ್ಳಲಾಗುತ್ತದೆ. ನಮ್ಮ ಬಳಿ ವಿಡಿಯೋ ರೆಕಾರ್ಡಿಂಗ್ ಇದೆ. ಅದನ್ನು ಪರಿಶೀಲನೆ ನಡೆಸುತ್ತಿದ್ದೇವೆ ಎಂದು ಹೇಳಿದರು.

 

ಫ್ರೆಶ್ ನ್ಯೂಸ್

Latest Posts

Featured Videos