ವಿಶ್ವಕಪ್: ಟಾಸ್ ಗೆದ್ದ ಪಾಕಿಸ್ತಾನ ಬ್ಯಾಟಿಂಗ್ ಆಯ್ಕೆ..!

ವಿಶ್ವಕಪ್: ಟಾಸ್ ಗೆದ್ದ ಪಾಕಿಸ್ತಾನ ಬ್ಯಾಟಿಂಗ್ ಆಯ್ಕೆ..!

ಬೆಂಗಳೂರು: ಐಸಿಸಿ ಏಕದಿನ ವಿಶ್ವಕಪ್ 2023 ಟೂರ್ನಿ ಕುತೂಹಲ ಕೆರಳಿಸುತ್ತಿದೆ. ಇಂದು ನಡೆಯಲಿರುವ 26ನೇ ಪಂದ್ಯದಲ್ಲಿ ಬಾಬರ್ ಅಝಂ ನಾಯಕತ್ವದ ಪಾಕಿಸ್ತಾನ ತಂಡ ಟೆಂಬಾ ಬವುಮಾ ಅವರ ದಕ್ಷಿಣ ಆಫ್ರಿಕಾ ತಂಡವನ್ನು ಎದುರಿಸಲಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂ ಈ ಹೈವೋಲ್ಟೇಜ್ ಪಂದ್ಯಕ್ಕೆ ಸಾಕ್ಷಿಯಾಗಲಿದೆ. ಪಾಕ್ ತಂಡಕ್ಕೆ ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿದ್ದು ಗೆದ್ದರಷ್ಟೆ ಉಳಿಗಾಲ. ಸೋತರೆ ಟೂರ್ನಿಯಿಂದ ಬಹುತೇಕ ಹೊರಬಿದ್ದಂತೆ. ಇತ್ತ ಆಫ್ರಿಕಾ ಇಂದು ಗೆದ್ದರೆ ಟೇಬಲ್ ಟಾಪರ್ ಆಗಲಿದೆ. ಭಾರತ ದ್ವಿತೀಯ ಸ್ಥಾನಕ್ಕೆ ಕುಸಿಯಲಿದೆ.

ಬಾಬರ್ ಅಝಂ ನಾಯಕತ್ವದ ಪಾಕಿಸ್ತಾನ ತಂಡ, ಟೆಂಬಾ ಬವುಮಾ ನೇತೃತ್ವದ ದಕ್ಷಿಣ ಆಫ್ರಿಕಾ ತಂಡವನ್ನು ಎದುರಿಸುತ್ತಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂ ಈ ಹೈವೋಲ್ಟೇಜ್ ಪಂದ್ಯಕ್ಕೆ ಸಾಕ್ಷಿಯಾಗಿದೆ. ಈ ಪಂದ್ಯದ ಟಾಸ್ ಕೂಡ ನಡೆದಿದ್ದು, ಟಾಸ್ ಗೆದ್ದ ಪಾಕ್ ತಂಡದ ನಾಯಕ ಬಾಬರ್ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos