ಮತ್ತೋಬ್ಬಳಿಂದ ಮೊಳಗಿತು ಪಾಕಿಸ್ತಾನ್ ಜಿಂದಾಬಾದ್ ಘೋಷಣೆ?

ಮತ್ತೋಬ್ಬಳಿಂದ ಮೊಳಗಿತು ಪಾಕಿಸ್ತಾನ್ ಜಿಂದಾಬಾದ್ ಘೋಷಣೆ?

ಬೆಂಗಳೂರು, ಫೆ. 21: ನಿನ್ನೆ ನಡೆದ ಎನ್‌ಆರ್‌ಸಿ, ಸಿಎಎ ಪ್ರತಿಭಟನೆ ವೇಳೆ ಅಮೂಲ್ಯ ಲಿಯೋ ಪಾಕಿಸ್ತಾನದ ಪರ ಘೋಷಣೆ ಕೂಗಿ ಸದ್ಯ ನ್ಯಾಯಾಂಗ ಬಂಧನಕ್ಕೆ ಒಳಗಾಗಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ

ಈ ವಿಚಾರ ಚರ್ಚೆಯಲ್ಲಿರುವಾಗಲೇ, ಟೌನ್ ಹಾಲ್ ಎದುರು ಮಹಿಳೆಯೋರ್ವಳು ಇದೇ ರೀತಿ ಘೋಷಣೆ ಕೂಗಿದ್ದಾರೆ ಎನ್ನಲಾಗಿದೆ.

ಅಮೂಲ್ಯ ವಿರುದ್ಧ ಟೌನ್ ಹಾಲ್ನಲ್ಲಿ ಹಿಂದೂ ಪರ ಸಂಘಟನೆಗಳಿಂದ ಪ್ರತಿಭಟನೆ ನಡೆಯುತ್ತಿತ್ತು. ಈ ವೇಳೆ ಅರುದ್ರಾ ಹೆಸರಿನ ಮಹಿಳೆಯೋರ್ವಳು ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆ ಎನ್ನಲಾಗಿದೆ. ಕೂಡಲೇ ಆಕೆಯನ್ನು ಎಸ್ಜೆ ಪಾರ್ಕ್ ಪೊಲೀಸರು ವಶಕ್ಕೆ ಪಡೆದು, ಅಜ್ಞಾತ ಸ್ಥಳಕ್ಕೆ ಕರೆದೊಯ್ದಿದ್ದಾರೆ.

ಈ ಪ್ರತಿಭಟನೆಗೆ ಏಕೆ ಬಂದಳು ಎನ್ನುವ ಬಗ್ಗೆ ಪರಿಶೀಲನೆ ನಡೆಯುತ್ತಿದೆ. ಈ ಬಗ್ಗೆ ಮಾತನಾಡಿರುವ ಡಿಸಿಪಿ ಚೇತನ್ ಸಿಂಗ್, “ಟೌನ್ ಹಾಲ್ನಲ್ಲಿ ಪ್ರತಿಭಟನೆ ನಡೆಯುತ್ತಿತ್ತು. ಯುವತಿ ಫ್ರೀ ಕಾಶ್ಮೀರ ಪ್ಲೇ ಕಾರ್ಡ್ ಹಿಡಿದಿದ್ದಳು ಎನ್ನಲಾಗಿದೆ. ಆದರೆ, ಘೋಷಣೆ ಕೂಗಿರುವ ಬಗ್ಗೆ ನಮಗೆ ಗೊತ್ತಿಲ್ಲ. ದೃಶ್ಯಾವಳಿ ನೋಡಿ ನಂತರ ಮುಂದಿನ ಕ್ರಮ ಕೈಗೊಳ್ಳುತ್ತೇವೆ,” ಎಂದಿದ್ದಾರೆ.

ಯುವತಿ ಪಾಕಿಸ್ತಾನ್ ಜಿಂದಾಬಾದ್ ಹೇಳಿಕೆ ನೀಡಿಲ್ಲ ಎಂದು ಪೊಲೀಸರು ಹೇಳಿದ್ದಾರೆ. ಆದರೆ, ಆಕೆ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಕಿದ್ದಾಗಿ ಹಿಂದೂ ಪರ ಸಂಘಟನೆ ಕಾರ್ಯಕರ್ತರು ಹೇಳುತ್ತಿದ್ದಾರೆ. ಸದ್ಯ ಈ ಹೇಳಿಕೆ ಗೊಂದಲ ಸೃಷ್ಟಿಸಿದ್ದು, ಸೂಕ್ತ ತನಿಖೆ ನಡೆಸುವಂತೆ ಇನ್ಸ್ಪೇಕ್ಟರ್ ತನ್ವೀರ್ ಅವರಿಗೆ ಡಿಸಿಪಿ ಸೂಚಿಸಿದ್ದಾರೆ.

ತಪ್ಪಿತಸ್ಥರಿಗೆ ಶಿಕ್ಷೆ ಆಗಲಿ ಎಂದ ಸಿದ್ದರಾಮಯ್ಯ:ಪಾಕ್ ಪರ ಘೋಷಣೆ ಕೂಗಿದ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, “ಪಾಕಿಸ್ತಾನ ಪರ ಘೋಷಣೆ ಕೂಗಿರುವುದು ಖಂಡನೀಯ ನಡವಳಿಕೆ.ಪೊಲೀಸರು ಸರಿಯಾದ ತನಿಖೆ ನಡೆಸಿ ಆಕೆಗೆ ತನ್ನ ತಪ್ಪಿನ ಅರಿವಾಗುಂತಹ ಶಿಕ್ಷೆ ನೀಡಬೇಕು,” ಎಂದು ಆಗ್ರಹಿಸಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos