ಪಕ್ಷ ತ್ಯಜಿಸಿದ ಪ್ರಿಯಾಂಕಾ ಚತುರ್ವೇದಿ

ಪಕ್ಷ ತ್ಯಜಿಸಿದ ಪ್ರಿಯಾಂಕಾ ಚತುರ್ವೇದಿ

ನವದೆಹಲಿ, ಏ. 19, ನ್ಯೂಸ್ ಎಕ್ಸ್ ಪ್ರೆಸ್: ಕಾಂಗ್ರೆಸ್ ವಕ್ತಾರೆ ಪ್ರಿಯಾಂಕಾ ಚತುರ್ವೇದಿ ಕಳೆದ ರಾತ್ರಿ ಪಕ್ಷವನ್ನು ತ್ಯಜಿಸಿದ್ದಾರೆ.

ಕಳೆದ ವರ್ಷ ಸೆಪ್ಟಂಬರ್ನಲ್ಲಿ ಮಥುರಾದಲ್ಲಿ ರಫೇಲ್ ಯುದ್ದ ವಿಮಾನ ಒಪ್ಪಂದಕ್ಕೆ ಸಂಬಂಧಿಸಿ ಪತ್ರಿಕಾಗೋಷ್ಠಿ ನಡೆಸುತ್ತಿದ್ದಾಗ ಸ್ಥಳೀಯ ಕಾಂಗ್ರೆಸ್ ನಾಯಕರು ಪ್ರಿಯಾಂಕಾ ಅವರೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ ಎನ್ನಲಾಗಿದೆ.

ಆಗ ತಕ್ಷಣವೇ ಕಾಂಗ್ರೆಸ್ ಅಸಭ್ಯವಾಗಿ ವರ್ತಿಸಿದವರನ್ನು ಪಕ್ಷದಿಂದ ಅಮಾನತುಗೊಳಿಸಿತ್ತು. ಆದರೆ, ಇತ್ತೀಚೆಗೆ ಚುನಾವಣೆಯ ಹಿನ್ನೆಲೆಯಲ್ಲಿ ಸ್ಥಳೀಯರ ಬೆಂಬಲದ ಅಗತ್ಯವಿರುವ ಕಾರಣ ಪ್ರಿಯಾಂಕಾರೊಂದಿಗೆ ಅಸಭ್ಯವಾಗಿ ವರ್ತಿಸಿದ ಕೆಲವು ನಾಯಕರನ್ನು ವಾಪಸ್ ಕರೆಸಿಕೊಂಡಿತ್ತು.

ಇದರಿಂದ ಅಸಮಾಧಾನಗೊಂಡಿದ್ದ ಪ್ರಿಯಾಂಕಾ, ತನ್ನೊಂದಿಗೆ ಅಸಭ್ಯವಾಗಿ ವರ್ತಿಸಿದರನ್ನು ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳಲಾಗಿದೆ. ಪಕ್ಷದ ಘನತೆಗೆ ಧಕ್ಕೆ ತಂದವರ ವಿರುದ್ಧ ಏನೂ ಕ್ರಮ ಕೈಗೊಂಡಿಲ್ಲ್ಲ ಎಂದು ಇದರಿಂದ ಸ್ಪಷ್ಟವಾಗುತ್ತದೆ ಎಂದು ಪ್ರಿಯಾಂಕಾ ಅಸಮಾಧಾನ ವ್ಯಕ್ತಪಡಿಸಿದ್ದರು.

 

ಫ್ರೆಶ್ ನ್ಯೂಸ್

Latest Posts

Featured Videos