ನ್ಯೂಜಿಲೆಂಡ್ ವಿರುದ್ಧ ಪಂದ್ಯಕ್ಕೆ ಪಾಂಡ್ಯ ಅಲಭ್ಯ!

ನ್ಯೂಜಿಲೆಂಡ್ ವಿರುದ್ಧ ಪಂದ್ಯಕ್ಕೆ ಪಾಂಡ್ಯ ಅಲಭ್ಯ!

ಬೆಂಗಳೂರು: ಐಸಿಸಿ ಏಕದಿನ ವಿಶ್ವಕಪ್ 2023 ರಲ್ಲಿ ಇಂದು 17ನೇ ಪಂದ್ಯ ನಡೆಯಲಿದ್ದು ರೋಹಿತ್ ಶರ್ಮಾ ನಾಯಕತ್ವದ ಭಾರತ ಹಾಗೂ ಶಕಿಬ್ ಅಲ್ ಹಸನ್ ನೇತೃತ್ವದ ಬಾಂಗ್ಲಾದೇಶ ಮುಖಾಮುಖಿಯಾಗಿತ್ತು. ಇಂದು ನಾಲ್ಕನೇ ಪಂದ್ಯದಲ್ಲಿ ಬಾಂಗ್ಲಾದೇಶ ತಂಡವನ್ನು ಎದುರಿಸುತ್ತಿರುವ ಟೀಂ ಇಂಡಿಯಾಕ್ಕೆ ಆರಂಭದಲ್ಲೇ ಆಘಾತ ಎದುರಾಗಿದೆ. ಬೌಲಿಂಗ್ ಮಾಡುವ ವೇಳೆ ತಂಡದ ಸ್ಟಾರ್ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಇಂಜುರಿಗೆ ತುತ್ತಾಗಿ ತಮ್ಮ ಓವರ್ ಅನ್ನು ಪೂರ್ಣಗೊಳಿಸಲು ಸಾಧ್ಯವಾಗದೆ ಪೆವಿಲಿಯನ್ ಸೇರಿಕೊಂಡಿದ್ದಾರೆ. ‌

ಏಕದಿನ ವಿಶ್ವಕಪ್ನ ನಾಲ್ಕನೇ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ಭರ್ಜರಿ ಜಯ ಸಾಧಿಸಿರುವ ಟೀಂ ಇಂಡಿಯಾಕ್ಕೆ ಬಿಗ್ ಶಾಕ್ ಎದುರಾಗಿದೆ. ತನ್ನ ಮುಂದಿನ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಪಂದ್ಯವನ್ನಾಡಲಿರುವ ರೋಹಿತ್ ಪಡೆ, ತಂಡದ ಉಪನಾಯಕನಿಲ್ಲದೆ ಕಣಕ್ಕಿಳಿಯಬೇಕಾಗಿದೆ. ನಿನ್ನೆ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಬೌಲಿಂಗ್ ಮಾಡುವಾಗ ಗಾಯಗೊಂಡಿದ್ದ ಹಾರ್ದಿಕ್ ಪಾಂಡ್ಯ, ಕಿವೀಸ್ ವಿರುದ್ಧದ ಪಂದ್ಯಕ್ಕೆ ಅಲಭ್ಯರಾಗಲಿದ್ದಾರೆ ಎಂದು ಬಿಸಿಸಿಐ ಮಾಹಿತಿ ನೀಡಿದೆ. ವಿಶ್ವಕಪ್ ಇತಿಹಾಸದಲ್ಲಿ ಟೀಂ ಇಂಡಿಯಾ, ನ್ಯೂಜಿಲೆಂಡ್ ವಿರುದ್ಧ ಒಂದೇ ಒಂದು ಪಂದ್ಯವನ್ನು ಗೆದ್ದಿಲ್ಲ. ಆದರೆ ಈ ಬಾರಿ ಆ ದಾಖಲೆ ಮುರಿಯುವ ಹೊಸ್ತಿಲಿನಲ್ಲಿದ್ದ ತಂಡಕ್ಕೆ ಪಾಂಡ್ಯ ಅಲಭ್ಯತೆ ಕೊಂಚ ಹಿನ್ನಡೆಯನ್ನುಂಟು ಮಾಡಿದೆ.

ಫ್ರೆಶ್ ನ್ಯೂಸ್

Latest Posts

Featured Videos