ವಿಶ್ವಕಪ್:‌ ಅಭ್ಯಾಸ ಆರಂಭಿಸಿದ ಪಾಂಡ್ಯ!

ವಿಶ್ವಕಪ್:‌ ಅಭ್ಯಾಸ ಆರಂಭಿಸಿದ ಪಾಂಡ್ಯ!

ಬೆಂಗಳೂರು: ಐಸಿಸಿ ಏಕದಿನ ವಿಶ್ವಕಪ್ 2023 ರಲ್ಲಿ ಇಂದು 17ನೇ ಪಂದ್ಯ ನಡೆಯಲಿದ್ದು ರೋಹಿತ್ ಶರ್ಮಾ ನಾಯಕತ್ವದ ಭಾರತ ಹಾಗೂ ಶಕಿಬ್ ಅಲ್ ಹಸನ್ ನೇತೃತ್ವದ ಬಾಂಗ್ಲಾದೇಶ ಮುಖಾಮುಖಿ. ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆಯುತ್ತಿದೆ.

ನಾಲ್ಕನೇ ಪಂದ್ಯದಲ್ಲಿ ಬಾಂಗ್ಲಾದೇಶ ತಂಡವನ್ನು ಎದುರಿಸಿದ ಟೀಂ ಇಂಡಿಯಾಕ್ಕೆ ಆರಂಭದಲ್ಲೇ ಆಘಾತ ಎದುರಾಗಿತ್ತು. ಬೌಲಿಂಗ್ ಮಾಡುವ ವೇಳೆ ತಂಡದ ಸ್ಟಾರ್ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಇಂಜುರಿಗೆ ತುತ್ತಾಗಿ ತಮ್ಮ ಓವರ್ ಅನ್ನು ಪೂರ್ಣಗೊಳಿಸಲು ಸಾಧ್ಯವಾಗದೆ ಪೆವಿಲಿಯನ್ ಸೇರಿಕೊಂಡರು.

ಟೀಂ ಇಂಡಿಯಾದ ಸ್ಟಾರ್ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಆದಷ್ಟು ಬೇಗ ತಂಡವನ್ನು ಸೇರಿಕೊಳ್ಳಲಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ.

ಪಾಂಡ್ಯ ಪ್ರಸ್ತುತ ಬೆಂಗಳೂರಿನ ಎನ್‌ಸಿಎಯಲ್ಲಿದ್ದು, ಮುಂದಿನ ಕೆಲವು ಪಂದ್ಯಗಳಿಂದ ಹೊರಗುಳಿಯಲಿದ್ದಾರೆ. ಆದರೆ ನಾಕ್ ಔಟ್ ಹಂತಕ್ಕೂ ಮುನ್ನ ಫಿಟ್ ಆಗುವ ಸಾಧ್ಯತೆ ಇದ್ದು, ತಂಡವನ್ನು ಸೇರಿಕೊಳ್ಳಲಿದ್ದಾರೆ. ಸೆಮಿಫೈನಲ್‌ಗೂ ಮುನ್ನ ಟೀಂ ಇಂಡಿಯಾ ಅಕ್ಟೋಬರ್ 29 ರಂದು ಇಂಗ್ಲೆಂಡ್, ನವೆಂಬರ್ 2 ರಂದು ಶ್ರೀಲಂಕಾ, ನವೆಂಬರ್ 5 ರಂದು ದಕ್ಷಿಣ ಆಫ್ರಿಕಾ ಮತ್ತು ನವೆಂಬರ್ 12 ರಂದು ನೆದರ್ಲ್ಯಾಂಡ್ಸ್ ವಿರುದ್ಧ ಆಡಬೇಕಿದೆ. ಮಾಧ್ಯಮ ವರದಿಗಳ ಪ್ರಕಾರ, ನವೆಂಬರ್ 5 ರಂದು ನಡೆಯಲ್ಲಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದೊಂದಿಗೆ ಹಾರ್ದಿಕ್ ಪಾಂಡ್ಯ ಟೀಂ ಇಂಡಿಯಾಗೆ ಮರಳುವ ಸಾಧ್ಯತೆಯಿದೆ.

ಫ್ರೆಶ್ ನ್ಯೂಸ್

Latest Posts

Featured Videos