ಖ್ಯಾತ ಗಜಲ್ ಗಾಯಕ ಪಂಕಜ್ ಉದಾಸ್ ನಿಧನ

ಖ್ಯಾತ ಗಜಲ್ ಗಾಯಕ ಪಂಕಜ್ ಉದಾಸ್ ನಿಧನ

ಬೆಂಗಳೂರು: ಹಿರಿಯ ಗಜಲ್ ಗಾಯಕ ಪಂಕಜ್ ಉದಾಸ್ ಅವರು ಇಹ ಲೋಕ ತ್ಯಜಿಸಿದ್ದಾರೆ.  ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು. ಇಂದು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.  ಅವರಿಗೆ 73 ವರ್ಷ ವಯಸ್ಸಾಗಿತ್ತು. ಪಂಕಜ್ ಉದಾಸ್ ನಿಧನದ ಸುದ್ದಿಯನ್ನು ಅವರ ಕುಟುಂಬ ದೃಢಪಡಿಸಿದೆ.  ಈ  ಬಗ್ಗೆ ಗಾಯಕನ ಕುಟುಂಬ ಹೇಳಿಕೆಯನ್ನು ಬಿಡುಗಡೆ ಮಾಡಿದೆ.

ದೀರ್ಘಕಾಲದ ಅನಾರೋಗ್ಯದಿಂದ ಬಳುತ್ತಿದ್ದ ಪದ್ಮಶ್ರೀ ಪಂಕಜ್ ಉದಾಸ್  ನಿಧನದ ಬಗ್ಗೆ ತುಂಬಾ ಭಾರವಾದ ಹೃದಯದಿಂದ ತಿಳಿಸುತ್ತಿದ್ದೇವೆ ಎಂದು ಅವರ ಕುಟುಂಬ ಟ್ವೀಟ್ ಮೂಲಕ ಹೇಳಿಕೆ ಬಿಡುಗಡೆ ಮಾಡಿದೆ.

ಪಂಕಜ್​ ಉಧಾಸ್​ ಅವರ ನಿಧನಕ್ಕೆ ಸೆಲೆಬ್ರಿಟಿಗಳು, ಅಭಿಮಾನಿಗಳು ಕಂಬನಿ ಮಿಡಿಯುತ್ತಿದ್ದಾರೆ. ‘ಸ್ಪರ್ಶ’ಸಿನಿಮಾದಲ್ಲಿನ ‘ಬರೆಯದ ಮೌನದ ಕವಿತೆ ಹಾಡಾಯಿತು..’, ‘ಚಂದಕಿಂತ ಚಂದ ನೀನೇ ಸುಂದರ..’ ಹಾಡುಗಳು ಪಂಕಜ್​ ಉಧಾಸ್​ ಅವರ ಕಂಠದಲ್ಲಿ ಮೂಡಿಬಂದಿದ್ದವು. ಕೇಳುಗರ ಫೇವರಿಟ್​ ಲಿಸ್ಟ್​ನಲ್ಲಿ ಈ ಹಾಡುಗಳು ಈಗಲೂ ಜಾಗ ಪಡೆದುಕೊಂಡಿವೆ. ಪಂಕಜ್​ ಉಧಾಸ್​ ಅವರ ಅಗಲಿಕೆಗೆ ಕರುನಾಡಿನಲ್ಲಿನ ಅಭಿಮಾನಿಗಳು ಕೂಡ ಕಂಬನಿ ಮಿಡಿಯುತ್ತಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos