ಸರ್ಕಾರಿ ಶಾಲೆಗಳತ್ತ ಪೋಷಕರ ಚಿತ್ತ

ಸರ್ಕಾರಿ ಶಾಲೆಗಳತ್ತ ಪೋಷಕರ ಚಿತ್ತ

ಚಿಕ್ಕಬಳ್ಳಾಪುರ: ಅನುದಾನ ರಹಿತ ಶಾಲೆಗಳಲ್ಲಿನ ಆರ್‌ಟಿಇ ಸೀಟ್ ರದ್ದತಿ ಹಾಗೂ ಲಾಕ್ ಡೌನ್ ಸೃಷ್ಟಿಸಿದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ನಂತರ ಅನೇಕ ಪಾಲಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಕಳಿಸುತ್ತಿದ್ದಾರೆ. ಹೀಗಾಗಿ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿದೆ.
ಖಾಸಗಿ ಶಾಲೆಗಳಲ್ಲಿ ಓದುತ್ತಿದ್ದ ೨,೬೭೩ ಮಕ್ಕಳು ೨೦೨೦–೨೧ನೇ ಸಾಲಿನಲ್ಲಿ ಜಿಲ್ಲೆಯ ವಿವಿಧ ಸರ್ಕಾರಿ ಶಾಲೆಗಳಿಗೆ ಸೇರುವ ಮೂಲಕ ದಾಖಲಾತಿಯಲ್ಲಿ ದಾಖಲೆ ಸೃಷ್ಟಿಸಿದ್ದಾರೆ. ಪೋಷಕರು ಇಷ್ಟು ದೊಡ್ಡ ಪ್ರಮಾಣದಲ್ಲಿ ಸರ್ಕಾರಿ ಶಾಲೆಗಳತ್ತ ಒಲವು ತೋರಿರುವುದು ಇದೇ ಮೊದಲು ಎನ್ನುತ್ತಾರೆ ಇಲಾಖೆಯ ಹಿರಿಯ ಅಧಿಕಾರಿಗಳು.
ಪ್ರತಿವರ್ಷ ನಾನಾ ಕಾರಣಗಳಿಂದ ಸುಮಾರು ೨೫೦ ರಿಂದ ೩೦೦ ಮಕ್ಕಳು ಮಾತ್ರ ಸರ್ಕಾರಿ ಶಾಲೆಗಳತ್ತ ಮುಖ ಮಾಡುತ್ತಿದ್ದರು. ಆದರೆ, ಈ ಬಾರಿ ಎರಡೂವರೆ ಸಾವಿರಕ್ಕೂ ಹೆಚ್ಚು ಮಕ್ಕಳು ಸರ್ಕಾರಿ ಶಾಲೆಗಳಿಗೆ ಪ್ರವೇಶಾತಿ ಪಡೆದಿರುವುದು ಶಿಕ್ಷಣಾಧಿಕಾರಿ ಮತ್ತು ಶಿಕ್ಷಕರ ಸಂತಸವನ್ನು ಹೆಚ್ಚಿಸಿದೆ.
ಖಾಸಗಿ ಶಾಲೆಗಳ ಸ್ಥಿತಿ ಅನಿಶ್ಚಿತತೆಯಿಂದ ಕೂಡಿರುವ ಹೊತ್ತಿನಲ್ಲಿ ಮಕ್ಕಳು ಕಲಿಕೆಯಿಂದ ವಂಚಿತರಾಗಬಾರದು ಎಂದು ಶಿಕ್ಷಣ ಇಲಾಖೆ ವಿದ್ಯಾಗಮ ಕಾರ್ಯಕ್ರಮವನ್ನು ಜಾರಿಗೊಳಿಸಿತು. ಇದರಿಂದ ಮಕ್ಕಳ ಮನೆಯಂಗಳಕ್ಕೆ ಹೋಗಿ ಶಿಕ್ಷಕರು ಪಾಠ ಮಾಡಿದರು. ಇದು ಬಹಳಷ್ಟು ಪೋಷಕರು ಮತ್ತು ಮಕ್ಕಳ ಮನಸ್ಸನ್ನು ಗೆದ್ದಿದೆ ಎನ್ನುತ್ತಾರೆ ಶಿಕ್ಷಣ ಇಲಾಖೆ ಅಧಿಕಾರಿಗಳು.
ಅತಿ ಹೆಚ್ಚು
ಚಿಕ್ಕಬಳ್ಳಾಪುರ (೭೪೩), ಗೌರಿಬಿದನೂರು (೬೭೮), ಚಿಂತಾಮಣಿ (೪೮೨), ಬಾಗೇಪಲ್ಲಿ (೩೮೦), ಶಿಡ್ಲಘಟ್ಟ (೩೨೬), ಗುಡಿಬಂಡೆ (೬೪) ವಿದ್ಯಾರ್ಥಿಗಳು ಸರ್ಕಾರಿ ಶಾಲೆಯತ್ತ ಮುಖ ಮಾಡಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos