ನವದೆಹಲಿ, ಅ. 6 : ದೀಪಗಳ ಹಬ್ಬ ದೀಪಾವಳಿ ಸಂಭ್ರಮದಲ್ಲಿ ಪರಿಸರಕ್ಕೆ ಹಾನಿಕಾರಕ ಪಟಾಕಿಗಳನ್ನು ಸಿಡಿಸಿ ಮಾಲಿನ್ಯ ಮಾಡುವುದನ್ನು ತಡೆಯಲು ಪರಿಸರ ರಕ್ಷಣೆಗೆ ಕೇಂದ್ರ ಸರ್ಕಾರ ಮುಂದಾಗಿದೆ. ಆದ್ದರಿಂದ ಶನಿವಾರ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಅವರು ಹಸಿರು ಪಟಾಕಿಗಳನ್ನು ಬಿಡುಗಡೆ ಮಾಡಿದ್ದಾರೆ.
ಸಾಮಾನ್ಯ ಪಟಾಕಿಗಳಿಗೆ ಹೋಲಿಸಿದರೆ ಈ ಹಸಿರು ಪಟಾಕಿಯಿಂದ ಶೇ.30ರಷ್ಟು ಮಾಲಿನ್ಯ ಕಡಿಮೆಯಾಗಲಿದೆ. ಆದ್ದರಿಂದ ಭಾವನೆ ಹಾಗೂ ಪರಿಸರಕ್ಕೆ ಅಡ್ಡಿಯಾಗದಂತೆ ಪರಿಸರ ಸ್ನೇಹಿ ಪಟಾಕಿಗಳನ್ನು ಪರಿಚಯಿಸಲಾಗುತ್ತಿದೆ ಎಂದು ಹರ್ಷವರ್ಧನ್ ತಿಳಿಸಿದರು.