ನವದೆಹಲಿ, ಜು. 2 : ಮುನಿಸಿಪಲ್ ಅಧಿಕಾರಿ ಧೀರೇಂದ್ರ ಸಿಂಗ್ ಬೈಸ್ ಅವರ ಮೇಲೆ ಕ್ರಿಕೆಟ್ ಬ್ಯಾಟ್ ನಿಂದ ಹಲ್ಲೆ ನಡೆಸಿದ್ದ ಕೃತ್ಯ ಸಿಸಿ ಟಿವಿ ಕ್ಯಾಮರಗಳಲ್ಲಿ ಸೆರೆಯಾಗಿದೆ. ಈ ದೃಶ್ಯಗಳು ದೇಶಾದ್ಯಂತ ವೈರಲ್ ಆಗಿ ಬಿಜೆಪಿ ಪಕ್ಷಕ್ಕೆ ತೀವ್ರ ಮುಜುಗರದ ತಂದಿದೆ ಎಂದು ಬಿಜೆಪಿ ಸಂಸದರ ಮೇಲೆ ಮೋದಿ ಕೆಂಡವಾಗಿದ್ದಾರೆ. ಇನ್ನೊಂದು ಬಾರಿ ಈ ರೀತಿ ಆಗ ಬಾರದೆಂದು ಖಡಕ್ ಎಚ್ಚರಿಕೆ ನೀಡಿದ್ದಾರೆ. ಮಧ್ಯಪ್ರದೇಶದ ಬಿಜೆಪಿ ಶಾಸಕ, ಕೈಲಾಷ್ ವಿಜಯ ವರ್ಗೀಯ ಅವರ ಪುತ್ರ ಆಕಾಶ್ ವಿಜಯ ವರ್ಗೀಯ ಅವರ ವರ್ತನೆಗೆ ತೀವ್ರ ಬೇಸರ ವ್ಯಕ್ತಪಡಿಸಿರುವ ಪ್ರಧಾನಿ ಮೋದಿ ಪಕ್ಷದ ಶಾಸಕರು, ಸಂಸದರು ಕಾನೂನು ಕೈಗೆತ್ತಿಕೊಳ್ಳಬಾರದು ಎಂದು ಎಚ್ಚರಿಕೆ ನೀಡಿದ್ದಾರೆ.
ಬಿಜೆಪಿ ಸಂಸದೀಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ರಾಜಕೀಯ ನಾಯಕ ಕಾನೂನು ಕೈಗೆತ್ತಿಕೊಳ್ಳುವುದನ್ನು ಬೆಂಬಲಿಸುವವರ ವಿರುದ್ದ ಬಿಜೆಪಿ ನಾಯಕತ್ವ ಕಠಿಣ ಕ್ರಮ ಜರುಗಿಸಬೇಕು ಎಂದು ಪ್ರಧಾನಿ ಮೋದಿ ಸಭೆಯಲ್ಲಿ ಸಲಹೆ ನೀಡಿದ್ದಾರೆ. ಯಾವ ನಾಯಕನ ಮಗನೇ ಆಗಿರಲಿ, ಇಂತಹ ಕೃತ್ಯ ಸಹಿಸಲು ಆಗುವುದಿಲ್ಲ ಎಂದು ಪ್ರಧಾನಿ ಮೋದಿ ಬಿಜೆಪಿ ಸಂಸದರಿಗೆ ಖಡಕ್ ವಾರ್ನಿಂಗ್ ನೀಡಿದ್ದಾರೆ.