ಹಿರಿಯ ಪತ್ರಕರ್ತ ಅರ್ಜುನ್ ದೇವ್ ನಿಧನ

ಹಿರಿಯ ಪತ್ರಕರ್ತ ಅರ್ಜುನ್ ದೇವ್ ನಿಧನ

ಬೆಂಗಳೂರು: ಹಿರಿಯ ಪತ್ರಕರ್ತರು, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾಗಿದ್ದ ಅರ್ಜುನ್ ದೇವ್ (92) ಅವರು ಕೆಂಗೇರಿ ಉಪನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಇಬ್ಬರು ಮಕ್ಕಳು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಹುಟ್ಟೂರಾದ ಕೋಲಾರ ಜಿಲ್ಲೆ ಚೌಡದೇವನಹಳ್ಳಿಯಲ್ಲಿ ಸಂಜೆ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.

ತಾಯಿನಾಡು ಪತ್ರಿಕೆ, ಸಂಯುಕ್ತ ಕರ್ನಾಟಕ, ಪ್ರಜಾವಾಣಿ ಪತ್ರಿಕೆಯಲ್ಲಿ ಸೇವೆ ಸಲ್ಲಿಸಿದ್ದ ಅವರು ಸುರ್ಯೋದಯ ಪತ್ರಿಕೆ ಸಂಪಾದಕರಾಗಿಯೂ ಕೆಲಸ ಮಾಡಿದ್ದರು.

 

ಫ್ರೆಶ್ ನ್ಯೂಸ್

Latest Posts

Featured Videos