ಫಲಿತಾಂಶಕ್ಕೂ ಮುನ್ನವೇ ಪ್ರಜ್ವಲ್ ರೇವಣ್ಣ ಸದಸ್ಯ

ಫಲಿತಾಂಶಕ್ಕೂ ಮುನ್ನವೇ ಪ್ರಜ್ವಲ್ ರೇವಣ್ಣ ಸದಸ್ಯ

ಹಾಸನ, ಮೇ. 8, ನ್ಯೂಸ್ ಎಕ್ಸ್ ಪ್ರೆಸ್: ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ 2 ಹಂತಗಳಲ್ಲಿ ಮತದಾನ ನಡೆದಿದ್ದು, ಅಭ್ಯರ್ಥಿಗಳ ಫಲಿತಾಂಶಕ್ಕಾಗಿ ರಣ ಹದ್ದುಗಳಂತ್ತೆ ಕಾವುತ್ತಿದ್ದಾರೆ. ಇದರ ಮಧ್ಯೆ ಹಾಸನ ಲೋಕಸಭಾ ಕ್ಷೇತ್ರದಿಂದ ಮೈತ್ರಿಕೂಟದ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಪ್ರಜ್ವಲ್ ರೇವಣ್ಣ, ಫಲಿತಾಂಶ ಪ್ರಕಟವಾಗುವ ಮೊದಲೇ ಸಂಸದರಾಗಿದ್ದಾರೆ.

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ವಿವಾಹ ಆಮಂತ್ರಣ ಪತ್ರಿಕೆಯೊಂದರಲ್ಲಿ.

ಹೌದು, ಸಾಮಾಜಿಕ ಜಾಲತಾಣಗಳಲ್ಲಿ ವಿವಾಹ ಆಮಂತ್ರಣ ಪತ್ರಿಕೆಯೊಂದು ಹರಿದಾಡುತ್ತಿದ್ದು, ಇದರಲ್ಲಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಕುಟುಂಬಸ್ಥರ ಹೆಸರುಗಳಿವೆ. ಪ್ರಜ್ವಲ್ ರೇವಣ್ಣ ಅವರ ಹೆಸರಿನ ಮುಂದೆ ಲೋಕಸಭಾ ಸದಸ್ಯರು ಎಂದು ಮುದ್ರಿಸಲಾಗಿದ್ದು, ಈ ವಿವಾಹ ಜೂನ್ 27ರಂದು ನಡೆಯಲಿರುವ ಹಿನ್ನೆಲೆಯಲ್ಲಿ ಅಷ್ಟರೊಳಗೆ ಫಲಿತಾಂಶ ಪ್ರಕಟಗೊಂಡು ಪ್ರಜ್ವಲ್ ರೇವಣ್ಣ ಸಂಸದರಾಗಿರುತ್ತಾರೆಂಬ ವಿಶ್ವಾಸದಿಂದ ಈ ರೀತಿ ಮುದ್ರಿಸಲಾಗಿದೆ ಎಂದು ಹೇಳಲಾಗಿದೆ.

 

ಫ್ರೆಶ್ ನ್ಯೂಸ್

Latest Posts

Featured Videos