ಕೊನೆಯ ಓವರ್‌ನಲ್ಲಿ ಮುಗ್ಗರಿಸಿದ PBKS

ಕೊನೆಯ ಓವರ್‌ನಲ್ಲಿ ಮುಗ್ಗರಿಸಿದ PBKS

ಬೆಂಗಳೂರು: ನಿನ್ನೆ ನಡೆದ ಮುಲ್ಲನ್‌ಪುರದ ಮಹಾರಾಜ ಯಾದವೀಂದ್ರ ಸಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ 33ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ 9 ರನ್‌ಗಳಿಂದ ಸೋತಿತು.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ ಸೂರ್ಯಕುಮಾರ್ ಯಾದವ್ ಅವರ 53 ಎಸೆತಗಳಲ್ಲಿ 78 ರನ್‌ಗಳ ಅವರ ಅದ್ಭುತ ಇನ್ನಿಂಗ್ಸ್ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್‌ಗೆ 192 ರನ್‌ಗಳ ಬೃಹತ್ ಮೊತ್ತ ಕಲೆಹಾಕಿತು.

193 ರನ್‌ಗಳ ಗುರಿ ಬೆನ್ನಟ್ಟಿದ ಪಂಜಾಬ್ ಕಿಂಗ್ಸ್ ತಂಡಕ್ಕೆ ಶಶಾಂಕ್ ಸಿಂಗ್ 25 ಎಸೆತಗಳಲ್ಲಿ 41 ರನ್ ಮತ್ತು ಅಶುತೋಷ್ ಶರ್ಮಾ 28 ಎಸೆತಗಳಲ್ಲಿ 61 ರನ್‌ಗಳ ವೀರೋಚಿತ ಇನ್ನಿಂಗ್ಸ್‌ನಿಂದ ಆಸರೆಯಾಗಿದ್ದರು. ಆದರೆ ಅಂತಿಮವಾಗಿ 19.1 ಓವರ್‌ಗಳಲ್ಲಿ 183 ರನ್‌ಗಳಿಗೆ ಸರ್ವಪತನ ಕಂಡು 9 ರನ್‌ಗಳಿಂದ ಮತ್ತೊಮ್ಮೆ ಕೊನೆಯ ಓವರ್‌ನಲ್ಲಿ ಮುಗ್ಗರಿಸಿತು.

ಮುಂಬೈ ಇಂಡಿಯನ್ಸ್ ವಿರುದ್ಧದ ಸೋಲಿನ ನಂತರ, ಪಂಜಾಬ್ ಕಿಂಗ್ಸ್ ತಂಡ ಆಡಿದ ಏಳು ಪಂದ್ಯಗಳಲ್ಲಿ ಎರಡು ಗೆಲುವು ಮತ್ತು ಐದು ಸೋಲಿಗಳೊಂದಿಗೆ ನಾಲ್ಕು ಅಂಕಗಳನ್ನು ಹೊಂದಿದ್ದು, ಐಪಿಎಲ್ 2024ರ ಅಂಕಪಟ್ಟಿಯಲ್ಲಿ 9ನೇ ಸ್ಥಾನ ಪಡೆದುಕೊಂಡಿದೆ.

 

ಫ್ರೆಶ್ ನ್ಯೂಸ್

Latest Posts

Featured Videos