RCB ಪರ ಹೊಸ ಇತಿಹಾಸ ಬರೆದ ಪೆರ್ರಿ

RCB ಪರ ಹೊಸ ಇತಿಹಾಸ ಬರೆದ ಪೆರ್ರಿ

ಬೆಂಗಳೂರು: ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ಎಲಿಮಿನೇಟರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಖಾಮುಖಿಯಾಗಿತ್ತು. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಆರ್ಸಿಬಿ ಬ್ಯಾಟರ್ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಇದಾಗ್ಯೂ ಏಕಾಂಗಿಯಾಗಿ ಹೋರಾಡಿದ ಎಲ್ಲಿಸ್ ಪೆರ್ರಿ 50 ಎಸೆತಗಳಲ್ಲಿ 8 ಫೋರ್ ಹಾಗೂ 1 ಸಿಕ್ಸ್ನೊಂದಿಗೆ 66 ರನ್ಗಳ ಕೊಡುಗೆ ನೀಡಿದರು.

ಈ ಮೂಲಕ ಆರ್ಸಿಬಿ ತಂಡ 135 ರನ್ ಕಲೆಹಾಕುವಲ್ಲಿ ಪೆರ್ರಿ ಪ್ರಮುಖ ಪಾತ್ರವಹಿಸಿದ್ದರು. ಈ ಗುರಿಯನ್ನು ಬೆನ್ನತ್ತಿದ ಮುಂಬೈ ಇಂಡಿಯನ್ಸ್ 20 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು 130 ರನ್ಗಳಿಸಲಷ್ಟೇ ಶಕ್ತಾರಾದರು. ಈ ಮೂಲಕ ಆರ್ಸಿಬಿ 5 ವಿಕೆಟ್ಗಳ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಆರ್ಸಿಬಿ ತಂಡವು ಫೈನಲ್ಗೆ ಪ್ರವೇಶಿಸಿದೆ.

ಆರ್ಸಿಬಿ ಪರ ಇದುವರೆಗೆ 16 ಇನಿಂಗ್ಸ್ ಆಡಿರುವ ಎಲ್ಲಿಸ್ ಪೆರ್ರಿ 565 ರನ್ಗಳನ್ನು ಕಲೆಹಾಕಿದ್ದಾರೆ. ಈ ಮೂಲಕ ವುಮೆನ್ಸ್ ಪ್ರೀಮಿಯರ್ ಲೀಗ್ನಲ್ಲಿ ಆರ್ಸಿಬಿ ಪರ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್ ಎಂಬ ದಾಖಲೆ ಬರೆದಿದ್ದಾರೆ. ಇದರ ಜೊತೆಗೆ WPL ನಲ್ಲಿ ಅತೀ ಹೆಚ್ಚು ರನ್ ಬಾರಿಸಿದ 2ನೇ ಆಟಗಾರ್ತಿ ಎನಿಸಿಕೊಂಡಿದ್ದಾರೆ.

ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕಿ ಮೆಗ್ ಲ್ಯಾನಿಂಗ್. ವುಮೆನ್ಸ್ ಪ್ರೀಮಿಯರ್ ಲೀಗ್ನಲ್ಲಿ ಒಟ್ಟು 17 ಇನಿಂಗ್ಸ್ ಆಡಿರುವ ಲ್ಯಾನಿಂಗ್ 653 ರನ್ ಕಲೆಹಾಕಿ ಈ ದಾಖಲೆ ನಿರ್ಮಿಸಿದ್ದಾರೆ. ಇದೀಗ 565 ರನ್ ಕಲೆಹಾಕಿರುವ ಎಲ್ಲಿಸ್ ಪೆರ್ರಿ ಫೈನಲ್ ಪಂದ್ಯದಲ್ಲಿ 89 ರನ್ ಸಿಡಿಸಿದರೆ ಅಗ್ರಸ್ಥಾನಕ್ಕೇರಬಹುದು.

ಫ್ರೆಶ್ ನ್ಯೂಸ್

Latest Posts

Featured Videos