ಅರ್ಜಿ ವಜಾ ಡಿಕೆಶಿಗೆ ತುಸು ನಿರಾಳ

ಅರ್ಜಿ ವಜಾ ಡಿಕೆಶಿಗೆ ತುಸು ನಿರಾಳ

ನವದೆಹಲಿ, ನ. 15: ಮಾಜಿ ಸಚಿವ ಡಿಕೆ ಶಿವಕುಮಾರ್‌ಗೆ ಸುಪ್ರೀಂ ಕೋರ್ಟ್ ಇಡಿ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಕೈ ಬಿಟ್ಟು  ಬಿಗ್ ರಿಲೀಫ್ ನೀಡಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಹೈಕೋರ್ಟ್ ನೀಡಿದ್ದ ಜಾಮೀನು ಪ್ರಶ್ನಿಸಿ ಜಾರಿ ನಿರ್ದೇಶನಾಲಯ ಸಲ್ಲಿಸಿದ್ದ ಮೇಲ್ಮನವಿಯನ್ನು ಸರ್ವೋಚ್ಚ ನ್ಯಾಯಾಲಯ ವಜಾ ಮಾಡಿದೆ.

ಜಾರಿ ನಿರ್ದೇಶನಾಲಯ(ಇಡಿ) ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಬಲವಂತದ ಕ್ರಮ ಜರುಗಿಸಬಾರದು ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಸುಪ್ರೀಂ ಕೋರ್ಟ್ನ ನ್ಯಾಯಮೂರ್ತಿ  ರೋಹಿಂಗ್‌ಟನ್ ನಾರಿಮನ್  ಅವರನ್ನೊಳಗೊಂಡ ಪೀಠ ಇಡಿ ಮೇಲ್ಮನವಿಯನ್ನು  ಇಂದು ವಜಾಗೊಳಿಸಿದೆ

ಅಕ್ರಮ ಹಣ ವರ್ಗಾವಣೆಗೆ ಸಂಬಂಧಪಟ್ಟಂತೆ ಡಿ.ಕೆ.ಶಿವಕುಮಾರ್‌ರನ್ನು ಸೆ.3 ರಂದು ಇಡಿ ಬಂಧಿಸಿತ್ತು. ಇದಾದ ನಂತರ ಡಿಕೆಶಿ 48 ದಿನಗಳ ಕಾಲ ದೆಹಲಿಯ ತಿಹಾರ್ ಜೈಲಿನಲ್ಲಿ ಸೆರೆವಾಸ ಅನುಭವಿಸಿದ್ದರು.ಕಳೆದ ತಿಂಗಳಾಂತ್ಯದಲ್ಲಿ ದೆಹಲಿ ಹೈಕೋರ್ಟ್ ಶಿವಕುಮಾರ್‌ಗೆ ಜಾಮೀನು ಮಂಜೂರು ಮಾಡಿತ್ತು.ಸಧ್ಯ ಸುಪ್ರೀಂ ಕೋರ್ಟ್ ಆದೇಶದಿಂದ ಮಾಜಿ ಸಚಿವ ಶಿವಕುಮಾರ್ ತುಸು ನಿರಾಳರಾಗಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos