ಮಧ್ಯಂತರ ಹಣಕಾಸು ಸಚಿವರಾಗಿ ಪಿಯೂಶ್ ಗೋಯಲ್ ನೇಮಕ

ಮಧ್ಯಂತರ ಹಣಕಾಸು ಸಚಿವರಾಗಿ ಪಿಯೂಶ್ ಗೋಯಲ್ ನೇಮಕ

ನವದೆಹಲಿ: ಅರುಣ್ ಜೇಟ್ಲಿ ಅನಾರೋಗ್ಯದ ಕಾರಣ ವಿದೇಶದಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೇಲ್ವೆ ಸಚಿವ ಪಿಯೂಶ್ ಗೋಯಲ್ ಅವರಿಗೆ ಹಣಕಾಸು ಮತ್ತು ಕಾರ್ಪೋರೇಟ್ ವ್ಯವಹಾರಗಳ ಸಚಿವಾಲಯದ ಹೆಚ್ಚುವರಿ ಜವಾಬ್ದಾರಿ ನೀಡಿ ಆದೇಶ ಹೊರಡಿಸಲಾಗಿದೆ.

ಫೆಬ್ರವರಿ 1ಕ್ಕೆ ಮಧ್ಯಂತರ ಬಜೆಟ್ ಮಂಡನೆಯಾಗಲಿದ್ದು, ಇನ್ನೂ ಕೇವಲ ಒಂದು ವಾರ ಬಾಕಿ ಉಳಿದಿದೆ. ಈ ಸಂದರ್ಭದಲ್ಲಿ ಪೂರ್ವಭಾವಿ ಸಿದ್ಧತೆಗಳು ನಡೆಯುತ್ತಿರುವ ಸಂದರ್ಭದಲ್ಲೇ ಜೇಟ್ಲಿಯವರು ಕ್ಯಾನ್ಸರ್ ಕಾಯಿಲೆಗೆ ಚಿಕಿತ್ಸೆ ಪಡೆದುಕೊಳ್ಳಲು ವಿದೇಶಕ್ಕೆ ತೆರಳಿದ್ದಾರೆ. ಈ ಹಿನ್ನೆಲೆಯಲ್ಲಿ ಮಧ್ಯಂತರ ಬಜೆಟ್ ಮಂಡನೆಯ ಹಣಕಾಸು ಸಚಿವರಾಗಿ ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರಿಗೆ ಜವಾಬ್ದಾರಿ ವಹಿಸಲಾಗಿದೆ. ಕೇಂದ್ರ ಹಣಕಾಸು ಮಂತ್ರಿ ಅರುಣ್ ಜೇಟ್ಲಿ ಅವರು ಸದ್ಯಕ್ಕೆ ಯಾವುದೇ ಖಾತೆ ಹೊಂದಿಲ್ಲವಾದರೂ ಕೇಂದ್ರ ಸಚಿವರಾಗಿ ಮುಂದುವರೆಯಲಿದ್ದಾರೆ.

ಮಧ್ಯಂತರ ಬಜೆಟ್ ಸಾಮಾನ್ಯ ಕೇಂದ್ರ ಬಜೆಟ್ ನಂತೆ ಇರುವುದಿಲ್ಲ. ಮೋದಿ ಸರ್ಕಾರ ಫೆ.1ಕ್ಕೆ ಮಧ್ಯಂತರ ಬಜೆಟ್ ಮಂಡಿಸಲಿದ್ದು, ಚುನಾವಣೆಯ ನಂತರದಲ್ಲಿ ಅಧಿಕಾರಕ್ಕೆ ಬರುವ ಸರ್ಕಾರ ಪೂರ್ಣ ಪ್ರಮಾಣದ ಬಜೆಟ್ ಮಂಡಿಸಲಿದೆ.

ಫ್ರೆಶ್ ನ್ಯೂಸ್

Latest Posts

Featured Videos