ಪ್ಲಾಸ್ಟಿಕ್ ಮುಕ್ತ ಬೆಂಗಳೂರು

ಪ್ಲಾಸ್ಟಿಕ್ ಮುಕ್ತ ಬೆಂಗಳೂರು

ಬೆಂಗಳೂರು, ಸೆ. 13: ನಿಷೇಧಿತ ಪ್ಲಾಸ್ಟಿಕ್ ಉತ್ಪನ್ನಗಳನ್ನು ಬಳಕೆ ಮಾಡುವ ವ್ಯಾಪಾರಿಗಳು, ಉದ್ದಿಮೆದಾರರ ವ್ಯಾಪಾರ, ಉದ್ದಿಮೆ ಪರವಾನಗಿ ರದ್ದುಪಡಿಸುವುದು, ದಂಡದ ಪ್ರಮಾಣವನ್ನು ಮತ್ತಷ್ಟು ಹೆಚ್ಚಿಸುವಂತಹ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ್ ತಿಳಿಸಿದ್ದಾರೆ.

ಪ್ಲಾಸ್ಟಿಕ್ ಉತ್ಪನ್ನಗಳ ಬದಲು ಪರಿಸರ ಉತ್ಪನ್ನಗಳ ಬಳಕೆ ಪ್ರೊತ್ಸಾಹಿಸಲು ಬಿಬಿಎಂಪಿಯು ನಗರದ ಸ್ವಾತಂತ್ರ್ಯಉದ್ಯಾನದಲ್ಲಿ ಆಯೋಜಿಸಿರುವ ಮೂರು ದಿನಗಳ ‘ಪರ್ಯಾಯ ಉತ್ಪನ್ನಗಳ ವಿಶೇಷ ಮೇಳ’ ಉದ್ಘಾಟಿಸಿ ಅವರು ಮಾತನಾಡಿದರು.

ಪಾಲಿಕೆ ವ್ಯಾಪ್ತಿಯಲ್ಲಿ ನಿಷೇಧಿತ ಪ್ಲಾಸ್ಟಿಕ್ ಉತ್ಪನ್ನಗಳ ಸಂಪೂರ್ಣ ನಿಯಂತ್ರಣಕ್ಕೆ ಹಂತ ಹಂತವಾಗಿ ಕ್ರಮ ವಹಿಸಲಾಗುತ್ತಿದೆ. ಈಗಾಗಲೇ ಮಾರುಕಟ್ಟೆ, ಅಂಗಡಿಗಳಲ್ಲಿ ವ್ಯಾಪಾರಿಗಳು ಗ್ರಾಹಕರಿಗೆ ಪ್ಲಾಸ್ಟಿಕ್ ಕೈ ಚೀಲದಲ್ಲಿ ಉತ್ಪನ್ನಗಳನ್ನು ನೀಡಬಾರದೆಂದು ಸೂಚಿಸಲಾಗಿದೆ.

ಹೋಟೆಲ್ಗಳಲ್ಲಿ ಆಹಾರ ಪಾರ್ಸೆಲ್ ನೀಡಲು ಕಬ್ಬಿನ ತ್ಯಾಜ್ಯದಿಂದ ಉತ್ಪಾದಿಸಿದ ಬಾಕ್ಸ್ಗಳನ್ನು ಬಳಸುವಂತೆ ತಿಳಿಸಲಾಗಿದೆ. ನಿಯಮ ಪಾಲಿಸದವರಿಗೆ ದಂಡ ವಿಧಿಸಲಾಗುತ್ತಿದೆ. ಪ್ಲಾಸ್ಟಿಕ್ ಉತ್ಪನ್ನ ಬಳಸುವವರಿಗೆ ವಿಧಿಸುವ ದಂಡ ಹೆಚ್ಚಿಸುವುದು, ಉದ್ದಿಮೆ, ವ್ಯಾಪಾರ ಪರವಾನಗಿ ರದ್ದುಪಡಿಸುವ ಇನ್ನಷ್ಟುಬಿಗಿ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಪರಿಸರ ಸ್ನೆಹಿ ಉತ್ಪನ್ನಗಳ ಬಳಸಿ

ನಿಷೇದಿತ ಪ್ಲಾಸ್ಟಿಕ್ ಉತ್ಪನ್ನಗಳಿಗೆ ಪರ್ಯಾಯವಾಗಿ ಮಾರುಕಟ್ಟೆಯಲ್ಲಿ ಲಭ್ಯವಿರುವ ಪರಿಸರ ಸ್ನೆಹಿ ಉತ್ಪನ್ನಗಳನ್ನು ಉಪಯೋಗಿಸುವಂತೆ ಮೇಯರ್ ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಮೇಳದಲ್ಲಿ ಸುಮಾರು 50ಕ್ಕೂ ಹೆಚ್ಚು ಪ್ಲಾಸ್ಟಿಕೇತರ ವಸ್ತುಗಳ ಉತ್ಪಾದಕರು, ವಿತರಕರು, ಮಾರಾಟಗಾರರು ಭಾಗವಹಿಸಿ ತಾವು ಪ್ಲಾಸ್ಟಿಕ್ ಉತ್ಪನ್ನಗಳಿಗೆ ಪರ್ಯಾಯವಾಗಿ ತಯಾರಿಸಿರುವ ಪರಿಸರ ಉತ್ಪನ್ನಗಳನ್ನು ಪ್ರದರ್ಶನಕ್ಕಿಟ್ಟಿದ್ದಾರೆ. ಪರಿಸರ ಸ್ನೆಹಿ ತೆಂಗಿನ ನಾರಿನ ಬ್ಯಾಗ್, ಬಟ್ಟೆಬ್ಯಾಗ್, ಅಡಿಕೆ ಎಲೆ ಮತ್ತು ಗಾಣದಿಂದ ತೆಗೆದ ಕಬ್ಬಿನ ತ್ಯಾಜ್ಯ, ಬಾಳೆ ಎಲೆ, ಮುತ್ತುಗದ ಎಲೆಯಿಂದ ತಯಾರಿಸಿದ ತಟ್ಟೆ, ಲೋಟ, ಸ್ಪೂನ್ಗಳು ಸೇರಿದಂತೆ ಭೂಮಿಯಲ್ಲಿ ಕೊಳೆಯುವ, ಸುಲಭ ವಿಲೇವಾರಿ ಮಾಡಬಹುದಾದ ಸಾಕಷ್ಟುಉತ್ಪನ್ನಗಳು ಪ್ಲಾಸ್ಟಿಕ್ಗೆ ಪರ್ಯಾಯವಾಗಿ ಲಭ್ಯವಿದೆ. ಪರಿ ಉತ್ಪನ್ನಗಳ ದರ ಹೆಚ್ಚಿದೆ ಎಂಬ ದೂರುಗಳಿವೆ. ಎಲ್ಲರೂ ಇವುಗಳ ಬಳಕೆಗೆ ಮುಂದಾದರೆ, ಬೇಡಿಕೆ ಹೆಚ್ಚಾದಾಗ ದರ ತಾನಾಗಿಯೇ ಕಡಿಮೆ ಆಗುತ್ತದೆ. ಹಾಗಾಗಿ ಜನರು ಪ್ಲಾಸ್ಟಿಕೇತರ ಉತ್ಪನ್ನಗಳನ್ನು ಬಳಸಿ ಪ್ಲಾಸ್ಟಿಕ್ ಮುಕ್ತ ಬೆಂಗಳೂರು ನಿರ್ಮಾಣಕ್ಕೆ ಬಿಬಿಎಂಪಿಯೊಂದಿಗೆ ಕೈಜೋಡಿಸಬೇಕು ಎಂದ ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಉಪಮೇಯರ್ ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್, ಪಾಲಿಕೆ ಆಡಳಿತ ಪಕ್ಷದ ನಾಯಕ ಅಬ್ದುಲ್ ವಾಜಿದ್, ಜೆಡಿಎಸ್ ನಾಯಕಿ ನೇತ್ರಾ ನಾರಾಯಣ್ ಮತ್ತಿತರರು ಉಪಸ್ತಿತರಿದ್ದರು.

 

ಫ್ರೆಶ್ ನ್ಯೂಸ್

Latest Posts

Featured Videos