ಎದುರಾಯ್ತು ಸಂಕಷ್ಟ ‘ಪಿಎಂ ನರೇಂದ್ರ ಮೋದಿ’ ಚಿತ್ರಕ್ಕೆ

ಎದುರಾಯ್ತು ಸಂಕಷ್ಟ ‘ಪಿಎಂ ನರೇಂದ್ರ ಮೋದಿ’ ಚಿತ್ರಕ್ಕೆ

ಮಾ, 26, ನ್ಯೂಸ್ ಎಕ್ಸ್ ಪ್ರೆಸ್: ‘ಪಿಎಂ ನರೇಂದ್ರ ಮೋದಿ’ ಚಿತ್ರವು ಇದೇ ಏ. 5 ರಂದು ಬಿಡುಗಡೆಗೆಸಿದ್ದವಾಗಿದೆ. ಈಗಾಗಲೇ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು, ಎಲ್ಲರ ಗಮನ ಸೆಳೆಯುತ್ತಿರುವ ಮಧ್ಯೆ ವಿವಾದಕ್ಕೂ ಕಾರಣವಾಗಿದೆ.

ಖ್ಯಾತ ಗೀತ ರಚನೆಕಾರ ಜಾವೇದ್ ಅಕ್ತರ್ ಪಿಎಂ ನರೇಂದ್ರ ಮೋದಿ ಚಿತ್ರಕ್ಕೆ ತಾವು ಸಾಹಿತ್ಯ ನೀಡಿಲ್ಲವಾದರೂ ಪೋಸ್ಟರ್ ನಲ್ಲಿ ನನ್ನ ಹೆಸರನ್ನು ಬಳಸಿಕೊಳ್ಳಲಾಗಿದೆ ಎಂದು ಅಚ್ಚರಿ ವ್ಯಕ್ತಪಡಿಸಿದ್ದರು. ಇದೀಗ ಈ ಚಿತ್ರವನ್ನು ಬಿಡುಗಡೆ ಮಾಡಬಾರದೆಂದು ಕಾಂಗ್ರೆಸ್, ಚುನಾವಣಾ ಆಯೋಗದ ಮೊರೆ ಹೋಗಿದೆ.

ಹಿರಿಯ ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ ನೇತೃತ್ವದ ನಿಯೋಗ ಚುನಾವಣಾ ಆಯುಕ್ತರನ್ನು ಭೇಟಿ ಮಾಡಿ, ಪಿಎಂ ನರೇಂದ್ರ ಮೋದಿ ಚಿತ್ರವನ್ನು ಉದ್ದೇಶಪೂರ್ವಕವಾಗಿಯೇ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಬಿಡುಗಡೆ ಮಾಡಲಾಗುತ್ತಿದೆಎಂದು ಹೇಳುತ್ತಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos