ಹುದ್ದೆಯಿಂದ ಕೆಳಗಿಳಿಸಲು ದೊಡ್ಡ ದೊಡ್ಡ ನಾಯಕರ ಯತ್ನ: ಮೋದಿ

ಹುದ್ದೆಯಿಂದ ಕೆಳಗಿಳಿಸಲು ದೊಡ್ಡ ದೊಡ್ಡ ನಾಯಕರ ಯತ್ನ: ಮೋದಿ

ಚಿಕ್ಕಬಳ್ಳಾಪುರ: ಲೋಕಸಭಾ ಚುನಾವಣೆ ಅಖಾಡ ರಂಗೇರಿದೆ, ರಾಜ್ಯದಲ್ಲಿ ಮತದಾನಕ್ಕೆ ಕೆಲ ದಿನಗಳು ಮಾತ್ರ ಬಾಕಿ ಇದೆ. ರಾಜಕೀಯ ಪಕ್ಷಗಳ ನಾಯಕರು ಮತದಾರನ್ನು ಸೆಳೆಯಲು ಕಸರತ್ತು ಮಾಡುತ್ತಿದ್ದಾರೆ. ಅಭ್ಯರ್ಥಿಗಳ ಪರ ಅಬ್ಬರ ಪ್ರಚಾರ ನಡೆಸುತ್ತಿದ್ದಾರೆ. ಬಿಜೆಪಿ ಅಭ್ಯರ್ಥಿಗಳ ಪರ ಮತ ಬೇಟೆಗಾಗಿ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಆಗಮಿಸಿದ್ದಾರೆ.

ಚಿಕ್ಕಬಳ್ಳಾಪುರ ತಾಲೂಕಿನ ಅಗಲಗುರ್ಕಿ ಬಳಿ ಸಮಾವೇಶದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ವಿಕಸಿತ ಭಾರತಕ್ಕಾಗಿ ಎನ್‌ಡಿಎ ಅಭ್ಯರ್ಥಿಗಳನ್ನು ಬೆಂಬಲಿಸಿ. ಕರ್ನಾಟಕದ ಅಭಿವೃದ್ಧಿಗೆ ಕೇಂದ್ರ ಎನ್‌ಡಿಎ ಸರ್ಕಾರ ಬದ್ಧವಾಗಿದೆ. ಕರ್ನಾಟಕದ ಉಜ್ವಲ ಭವಿಷ್ಯಕ್ಕಾಗಿ ಎನ್‌ಡಿಎ ಅಭ್ಯರ್ಥಿಗಳನ್ನು ಗೆಲ್ಲಿಸಿ ಎಂದು ಮನವಿ ಮಾಡಿದರು.

ಪ್ರಧಾನಿ ಹುದ್ದೆಯಿಂದ ನನ್ನನ್ನು ಕೆಳಗಿಳಿಸಲು ದೊಡ್ಡ ದೊಡ್ಡ ನಾಯಕರು ಯತ್ನಿಸುತ್ತಿದ್ದಾರೆ. ಆದರೆ  ನನಗೆ ನಾರಿಶಕ್ತಿಯ ಬೆಂಬಲ ಆಶೀರ್ವಾದವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದರು. ಇಂಡಿಯಾ ಬಣಕ್ಕೆ ನಾಯಕನಿಲ್ಲ, ಭವಿಷ್ಯದ ದೃಷ್ಟಿಕೋನವಿಲ್ಲ ಮತ್ತು ಅವರ ಇತಿಹಾಸವು ಹಗರಣಗಳಿಂದ ಕೂಡಿದೆ  ಎಂದು ಟೀಕಿಸಿದರು.

 

ಫ್ರೆಶ್ ನ್ಯೂಸ್

Latest Posts

Featured Videos