ಏ.27ಕ್ಕೆ ಬೆಳಗಾವಿ ಲೋಕಸಭೆ ಅಖಾಡಕ್ಕೆ ಮೋದಿ ಎಂಟ್ರಿ

ಏ.27ಕ್ಕೆ ಬೆಳಗಾವಿ ಲೋಕಸಭೆ ಅಖಾಡಕ್ಕೆ ಮೋದಿ ಎಂಟ್ರಿ

ಬೆಳಗಾವಿ: ರಾಜ್ಯದಲ್ಲಿ ಲೋಕಸಭಾ ಚುನಾವಣೆ ರಂಗೆರಿದ್ದು, ರಾಜ್ಯದಲ್ಲೇ ಅಭ್ಯರ್ಥಿಗಳು ಭರ್ಜರಿ ಪ್ರಚಾರ ಮಾಡುತ್ತಿದ್ದಾರೆ, ನಾಳೆ 14 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು, ಉಳಿದ 14 ಲೋಕಸಭಾ ಕ್ಷೇತ್ರಗಳಲ್ಲಿ ಮಾರ್ಚ್ 7ರಂದು ನಡೆಯಲಿದೆ.

ಉತ್ತರ ಕರ್ನಾಟಕ, ಮಧ್ಯ ಕರ್ನಾಟಕ ಹಾಗೂ‌ ಕಲ್ಯಾಣ ಕರ್ನಾಟಕದಲ್ಲಿ ಎರಡು ದಿನಗಳ ಕಾಲ ಪ್ರಧಾನಿ ನರೇಂದ್ರ ಮೋದಿ ಬೃಹತ್ ಸಾರ್ವಜನಿಕ ಸಮಾವೇಶದ ಮೂಲಕ ಮತಬೇಟೆ ನಡೆಸಲಿದ್ದಾರೆ.

ಬೆಳಗಾವಿ ಬಿಜೆಪಿ ಅಭ್ಯರ್ಥಿ ಜಗದೀಶ್​ ಶೆಟ್ಟರ್ ಪರ ಪ್ರಚಾರದ ಅಖಾಡಕ್ಕೆ ಧುಮುಕಲಿರುವ ಪ್ರಧಾನಿ ಮೋದಿ ಏಪ್ರಿಲ್ 28ರಂದು ಬೆಳಗ್ಗೆ 10ಕ್ಕೆ ಬೆಳಗಾವಿ ನಗರದ ಯಡಿಯೂರಪ್ಪ ಮಾರ್ಗದಲ್ಲಿರುವ ಮಾಲಿನಿ ಸಿಟಿಯಲ್ಲಿ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.‌

ಸಮಾವೇಶ ನಡೆಯುವ ಮುನ್ನಾ ದಿನವೇ ಬೆಳಗಾವಿಗೆ ಬರಲಿರುವ ಪ್ರಧಾನಿ ಮೋದಿ ಏಪ್ರಿಲ್​ 27ರ ಸಂಜೆ 7.30ಕ್ಕೆ ಬೆಳಗಾವಿಗೆ ಆಗಮಿಸಲಿದ್ದಾರೆ. ಅಂದು ಬೆಳಗಾವಿಯಲ್ಲೇ ವಾಸ್ತವ್ಯ ಹೂಡಲಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos