ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಮೋದಿ ಮನವಿ

ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಮೋದಿ ಮನವಿ

ದೆಹಲಿ: ದೇಶದಲ್ಲಿ ಲೋಕಸಭಾ ಚುನಾವನೆ ಏಪ್ರಿಲ್ 19 ರಿಂದ ಪ್ರಾರಂಭವಾಗಿದೆ, ಇಂದು ಎರಡನೇ ಹಂತದ ಲೋಕಸಭಾ ಚುನಾವಣೆಗೆ ಮತದಾನ ನಡೆಯುತ್ತಿದೆ . ದೇಶಾದ್ಯಂತ 13 ರಾಜ್ಯಗಳ 89 ಸ್ಥಾನಗಳಿಗೆ ಮತದಾನ ನಡೆಯುತ್ತಿದೆ.

ಇಂದು ದೇಶದ ಮತದಾರರು 1200ಕ್ಕೂ ಹೆಚ್ಚು ಅಭ್ಯರ್ಥಿಗಳ ರಾಜಕೀಯ ಭವಿಷ್ಯವನ್ನು ನಿರ್ಧರಿಸಲಿದ್ದಾರೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಇಡೀ ದೇಶದ ಜನತೆಗೆ ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಮನವಿ ಮಾಡಿದ್ದಾರೆ.

ಇದಲ್ಲದೇ ದೇಶದ ಯುವ ಮತದಾರರು ಹಾಗೂ ದೇಶದ ಮಹಿಳಾ ಶಕ್ತಿ ಉತ್ಸಾಹದಿಂದ ಮತದಾನ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ವಿಶೇಷ ಮನವಿ ಮಾಡಿದರು.

ಮಹಿಳೆಯರ ಸುರಕ್ಷತೆಗೆ ಆದ್ಯತೆ ನೀಡುವ, ತುಷ್ಟೀಕರಣ ರಾಜಕಾರಣವನ್ನು ತಿರಸ್ಕರಿಸುವ, ಕರ್ನಾಟಕದ ಘನತೆಯನ್ನು ಎತ್ತಿಹಿಡಿಯುವ, ನೀರಿನ ಕೊರತೆಯನ್ನು ನಿವಾರಿಸುವ, ನಾಗರಿಕರ ಭದ್ರತೆಯನ್ನು ಬಲಪಡಿಸುವ ಮತ್ತು ವಿಶ್ವದರ್ಜೆಯ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸುವ ಸರ್ಕಾರಕ್ಕೆ ಮತ ನೀಡುವಂತೆ ನಾನು ವಿನಂತಿಸುತ್ತೇನೆ ಎಂದು ಕನ್ನಡದಲ್ಲಿ ಹೇಳಿದ್ದಾರೆ.

 

 

ಫ್ರೆಶ್ ನ್ಯೂಸ್

Latest Posts

Featured Videos