ಲೋಕಸಭಾ ಚುನಾವಣೆ: ರಾಜ್ಯ ಪ್ರವಾಸ ಕೈಗೊಂಡಿರುವ ಪ್ರಧಾನಿ ಮೋದಿ

ಲೋಕಸಭಾ ಚುನಾವಣೆ: ರಾಜ್ಯ ಪ್ರವಾಸ ಕೈಗೊಂಡಿರುವ ಪ್ರಧಾನಿ ಮೋದಿ

ಬೆಂಗಳೂರು: ಲೋಕಸಭಾ ಚುನಾವಣೆಗೆ ನಾಳೆ ದಿನಾಂಕ ಘೋಷಣೆಯಾಗಲಿದ್ದು ಇದರ ನಡುವೆ ಮೋದಿ ನಾಳೆಯಿಂದ ಕರ್ನಾಟಕದಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ಮಾರ್ಚ್ 16 ರಿಂದ 18ರಂದು ರಾಜ್ಯ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಕಲ್ಬುರ್ಗಿ ಶಿವಮೊಗ್ಗದಲ್ಲಿ ನಡೆಯುವ ಬೃಹತ್ ಸಾರ್ವಜನಿಕ ಸಭೆಗಳಲ್ಲಿ ಭಾಗವಹಿಸಲಿದ್ದಾರೆ.

ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಮೋದಿ ಅವರ ಎರಡು ದಿನಗಳ ಪ್ರವಾಸಕ್ಕೆ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ. 16ರಂದು ಕಲಬುರಗಿಯ ಎನ್‍ವಿ ಆಟದ ಮೈದಾನದಲ್ಲಿ ಸಭೆ ನಡೆಯಲಿದೆ.

ನಾಳೆ ಮಧ್ಯಾಹ್ನ 2 ಗಂಟೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಕಲಬುರಗಿಗೆ ಭೇಟಿ ಕೊಡಲಿದ್ದಾರೆ. ಅಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಅವರು ಮಾತನಾಡಲಿದ್ದಾರೆ. ಬಳಿಕ 18ರಂದು ಮಧ್ಯಾಹ್ನ 2 ಗಂಟೆಗೆ ಶಿವಮೊಗ್ಗದಲ್ಲಿಯೂ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಪ್ರಧಾನಮಂತ್ರಿಯವರು ಮಾತನಾಡುತ್ತಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಶಾಸಕ ಸುನೀಲ್ ಕುಮಾರ್ ತಿಳಿಸಿದರು.

 

ಫ್ರೆಶ್ ನ್ಯೂಸ್

Latest Posts

Featured Videos