ಏ.20ರಂದು ರಾಜ್ಯಕ್ಕೆ ಮತ್ತೆ ಮೋದಿ ಆಗಮನ..!

ಏ.20ರಂದು ರಾಜ್ಯಕ್ಕೆ ಮತ್ತೆ ಮೋದಿ ಆಗಮನ..!

ಬೆಂಗಳೂರು: ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಪ್ರಚಾರ ತ್ರೀವ್ರಗೊಂಡಿದೆ. ಏ. 20ರಂದು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಚಿಕ್ಕಬಳ್ಳಾಪುರ ಮತ್ತು ಬೆಂಗಳೂರಿನಲ್ಲಿ ಪಕ್ಷದ ಅಭ್ಯರ್ಥಿಗಳ ಪರ ಮತಯಾಚನೆ ಮಾಡಲಿದ್ದಾರೆ. ಇದೀಗ ಮತ್ತೆ ಪ್ರಧಾನಿ ಮೋದಿ ಕರ್ನಾಟಕಕ್ಕೆ ಭೇಟಿ ನೀಡಲಿದ್ದು, ಏಪ್ರಿಲ್ 20ರಂದು ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರಿನಲ್ಲಿ ಸಾರ್ವಜನಿಕ ಸಮಾವೇಶಗಳಲ್ಲಿ ಭಾಗವಹಿಸಲಿದ್ದಾರೆ.

ಚಿಕ್ಕಬಳ್ಳಾಪುರ ಹಾಗೂ ಕೋಲಾರ ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಪರ ಮತಯಾಚಿಸಲಿದ್ದಾರೆ. ಏ.20ರಂದು ಮಧ್ಯಾಹ್ನ 3:30ರ ಸುಮಾರಿಗೆ ಪ್ರಧಾನಿ ಮೋದಿ ಆಗಮಿಸಲಿದ್ದಾರೆ. ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮೋದಿ ಬಂದಿಳಿಯಲಿದ್ದು, ಬಳಿಕ ಹೆಲಿಕಾಪ್ಟರ್ ಮೂಲಕ ಚಿಕ್ಕಬಳ್ಳಾಪುರಕ್ಕೆ ತೆರಳಲಿದ್ದಾರೆ. ಕೋಲಾರ ಹಾಗೂ ಚಿಕ್ಕಬಳ್ಳಾಪುರ ಬಿಜೆಪಿ ಅಭ್ಯರ್ಥಿಗಳ ಪರ ಭಾಷಣ ಮಾಡಲಿದ್ದಾರೆ.

ಪ್ರಧಾನಿ ಮೋದಿಗೆ ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡ, ಬಿಎಸ್ ಯಡಿಯೂರಪ್ಪ, ಹೆಚ್‌ಡಿ ಕುಮಾರಸ್ವಾಮಿ, ಬಿ.ವೈ ವಿಜಯೇಂದ್ರ, ಆರ್.ಅಶೋಕ್ ಸಾಥ್ ನೀಡಲಿದ್ದಾರೆ. ಚಿಕ್ಕಬಳ್ಳಾಪುರ ನಗರ ಹೊರವಲಯದ ಅಗಲಗುರ್ಕಿ ಬಳಿ ಸಮಾವೇಶ ನಡೆಯಲಿದೆ.

ಫ್ರೆಶ್ ನ್ಯೂಸ್

Latest Posts

Featured Videos