ಬೆಂಗಳೂರಿಗೆ ಪ್ರಧಾನಿ ಮೋದಿ ಆಗಮನ

ಬೆಂಗಳೂರಿಗೆ ಪ್ರಧಾನಿ ಮೋದಿ ಆಗಮನ

ಬೆಂಗಳೂರು: ಲೋಕಸಭಾ ಚುನಾವಣೆ ದೇಶದೆಲ್ಲಡೆ ಹಾಗೂ ರಾಜ್ಯದೆಲ್ಲಡೆ ರಂಗೇರಿದ್ದು, ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿದ್ದು ಪಕ್ಷದ ಎಲ್ಲಾ ಅಭ್ಯರ್ಥಿಗಳು ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ.

ರಾಜ್ಯದಲ್ಲಿ ಮತದಾದರನ್ನು ಸೆಳೆಯಲು ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಇಂದು ಆಗವಿಸುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸುತ್ತಿದ್ದು ಬೆಂಗಳೂರು ಅರಮನೆ ಮೈದಾನದಲ್ಲಿ ನಡೆಯಲಿರುವ ಬಿಜೆಪಿ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ಅರಮನೆ ಮೈದಾನದ ಸುತ್ತಮುತ್ತಲಿನ ರಸ್ತೆಗಳಲ್ಲಿ ವಾಹನ ಸಂಚಾರ ಮತ್ತು ನಿಲುಗಡೆಯನ್ನು ನಿರ್ಬಂಧಿಸಲಾಗಿದೆ.

ಈ ಹಿನ್ನಲೆ ಬಿಗಿ ಪೊಲೀಸ್​ ಬಂದೂಬಸ್ತ್ ಮಾಡಲಾಗಿದೆ. ಇನ್ನು ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ಸಮಾವೇಶ ಹಿನ್ನಲೆ ಅರಮನೆ ಸುತ್ತಲೂ ಹದ್ದಿನ ಕಣ್ಣು ಇಡಲಾಗಿದ್ದು, ಭದ್ರತೆಗಾಗಿ ಬರೊಬ್ಬರಿ ಎರಡು ಸಾವಿರ ಪೊಲೀಸರನ್ನು ನಿಯೋಜಿಸಲಾಗಿದೆ. ಜೊತೆಗೆ ಹೆಚ್ಚುವರಿ ಪೊಲೀಸ್ ವ್ಯವಸ್ಥೆ ಮಾಡಲಾಗಿದೆ.  ಸಮಾವೇಶ ನಡೆಯುವ ಅರಮನೆ ಮೈದಾನ, ಹೆಲಿಪ್ಯಾಡ್ , ಮೇಕ್ರಿ ಸರ್ಕಲ್ ಹಾಗೂ ಬಳ್ಳಾರಿ ರಸ್ತೆಯಲ್ಲಿ ಹೆಚ್ಚಿನ ಬಂದೋಬಸ್ತ್ ಮಾಡಲಾಗಿದೆ.

 

ಫ್ರೆಶ್ ನ್ಯೂಸ್

Latest Posts

Featured Videos