ಬಿ.ಎಸ್‌ ಯಡಿಯೂರಪ್ಪ ವಿರುದ್ಧ ಪೋಕ್ಸೋ ಕೇಸ್ ದಾಖಲು

ಬಿ.ಎಸ್‌ ಯಡಿಯೂರಪ್ಪ ವಿರುದ್ಧ ಪೋಕ್ಸೋ ಕೇಸ್ ದಾಖಲು

ಬೆಂಗಳೂರು: ಅಪ್ರಾಪ್ತಿಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪ ದಡಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿದೆ.

ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ. ಕಳೆದ ಫೆಬ್ರವರಿಯಲ್ಲಿ ತನ್ನ 17 ವರ್ಷದ ಪುತ್ರಿ ಮೇಲೆ ಯಡಿಯೂರಪ್ಪ ಲೈಂಗಿಕ ದೌರ್ಜನ್ಯ ಎಸಗಿದ್ದಾಗಿ ಮಹಿಳೆಯೊಬ್ಬಳು ಯಡಿಯೂರಪ್ಪ ವಿರುದ್ಧ ದೂರು ನೀಡಿದ್ದಾಳೆ ದೂರು ನೀಡಿದ ಮಹಿಳೆ ಉದ್ಯಮಿಗಳು ರಾಜಕಾರಣಿಗಳ ವಿರುದ್ಧ ಈವರೆಗೆ 53 ದಾಖಲಿಸಿದ್ದಾರೆ ಎನ್ನಲಾಗಿದ್ದು ಪೊಲೀಸರು ಪ್ರಕರಣ ದಾಖಲಿಸಿ ಕೊಂಡು ಪರಿಶೀಲನೆ ನಡೆಸುತ್ತಿದ್ದಾರೆ.

ಸಂತ್ರಸ್ತೆಯ ತಾಯಿ ನೀಡಿದ ದೂರಿನ ಅನ್ವಯ ಸದಾಶಿವನಗರ ಠಾಣಾ ಪೊಲೀಸರು ಯಡಿಯೂರಪ್ಪ ವಿರುದ್ಧ ಪೋಕ್ಸೋ ಹಾಗೂ 354 (A) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಫೆಬ್ರವರಿ 2 ರಂದು ಸಹಾಯ ಕೇಳಲು ಹೋಗಿದ್ದಾಗ ತನಗೆ ಲೈಂಗಿಕ ಕಿರುಕುಳ ನೀಡಿದ್ದಾಗಿ ಸಂತ್ರಸ್ತೆಯು ಎಫ್​ಐಆರ್​ನಲ್ಲಿ ಉಲ್ಲೇಖಿಸಿದ್ದಾಳೆ ಎಂದು ತಿಳಿದುಬಂದಿದೆ.

ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ಬಿಜೆಪಿಯು ಬಿರುಸಿನ ಚಟುವಟಿಕೆಗಳನ್ನು ನಡೆಸುತ್ತಿದೆ. ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ಓಡಾಡ ನಡೆಸುತ್ತಿರುವ ಯಡಿಯೂರಪ್ಪ ಅವರು ಚುನಾವಣಾ ಪ್ರಚಾರಕ್ಕೆ ಅಣಿಯಾಗುತ್ತಿದ್ದಾರೆ. ಈ ನಡುವೆ ಪೋಕ್ಸೋ ಪ್ರಕರಣ ದಾಖಲಾಗಿರುವುದು ಯಡಿಯೂರಪ್ಪ ಅವರು ಸಂಕಷ್ಟಕ್ಕೆ ಸಿಲುಕಿಸಿದಂತಾಗಿದೆ. ಬಂಧನದ ಭೀತಿಯೂ ಎದುರಾಗಿದೆ.

 

ಫ್ರೆಶ್ ನ್ಯೂಸ್

Latest Posts

Featured Videos