ವಿಷಾಹಾರ : 35 ವಿದ್ಯಾರ್ಥಿಗಳು ಅಸ್ವಸ್ಥ

ವಿಷಾಹಾರ : 35 ವಿದ್ಯಾರ್ಥಿಗಳು ಅಸ್ವಸ್ಥ

ಮುಂಬೈ,ಜ. 11 : ವಿಷಾಹಾರ ಸೇವಿಸಿ ಸುಮಾರು 35 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಮಹಾರಾಷ್ಟ್ರ ಪರ್ಭನಿ ಜಿಲ್ಲೆಯ ಸರ್ಕಾರಿ ವಸತಿ ಶಾಲೆಯಲ್ಲಿ ಸಂಭವಿಸಿದೆ. 145 ವಿದ್ಯಾರ್ಥಿಗಳಲ್ಲಿ 35 ವಿದ್ಯಾರ್ಥಿಗಳು ಊಟ ಸೇವಿಸಿದ ನಂತರ ಅವರಲ್ಲಿ ಆಮ್ಲೀಯತೆ(ಆಸಿಡಿಟಿ), ವಾಂತಿ, ತಲೆನೋವು, ಹೊಟ್ಟೆನೋವು , ತಲೆ ಸುತ್ತುವಿಕೆ ಕಾಣಿಸಿಕೊಂಡಿತು.
ಅಸ್ವಸ್ಥಗೊಂಡ ಮಕ್ಕಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಇದರಲ್ಲಿ ಕೆಲವರನ್ನು ಹೆಚ್ಚಿನ ಚಿಕಿತ್ಸೆಗಾಗಿ ನಾಂದೇಡ್ನ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಇನ್ಸ್ಪೆಕ್ಟರ್ ಸುಭಾಷ್ ರಾಥೋಡ್ ತಿಳಿಸಿದ್ದಾರೆ. ಅಸ್ವಸ್ಥಗೊಂಡಿದ್ದ ಮಕ್ಕಳು ಈಗ ಚೇತರಿಸಿಕೊಂಡಿದ್ದು ಅವರನ್ನು ಆಸ್ಪತ್ರೆಯಿಂದ ಶೀಘ್ರ ಬಿಡುಗಡೆಗೊಳಿಸಲಾಗುವುದು.

ಫ್ರೆಶ್ ನ್ಯೂಸ್

Latest Posts

Featured Videos