ಪೊಲೀಸರಿಗೆ ಸಿಹಿ ಸುದ್ದಿ ನೀಡಿದ ಸಿಎಂ

ಪೊಲೀಸರಿಗೆ  ಸಿಹಿ ಸುದ್ದಿ ನೀಡಿದ ಸಿಎಂ

ಬೆಂಗಳೂರು, ಜೂನ್.10, ನ್ಯೂಸ್ ಎಕ್ಸ್ ಪ್ರೆಸ್: ಪೊಲೀಸರ ವೇತನ ಪರಿಷ್ಕರಣೆ ಕುರಿತು ನೇಮಕಗೊಂಡಿದ್ದ ಎಡಿಜಿಪಿ ರಾಘವೇಂದ್ರ ಔರಾದ್ಕರ್‌ ಸಮಿತಿ ಜತೆ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಸೋಮವಾರ ಸಭೆ ನಡೆಸಲಿದ್ದಾರೆ.  ಪೊಲೀಸರಿಗೆ ಸಿಹಿ ಸುದ್ದಿ ನೀಡಲಿದ್ದಾರೆ. ಸೋಮವಾರ ಸಂಜೆ 5 ಗಂಟೆಗೆ  ಸಿಎಂ  ಎಚ್‌.ಡಿ.ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ವಿಧಾನಸೌಧದಲ್ಲಿ ನಡೆಯುವ ಸಮಿತಿಯಲ್ಲಿ ರಾಘವೇಂದ್ರ ಔರಾದ್ಕರ್‌ ಅವರ ಸಮಿತಿ ನೀಡಿದ್ದ ವರದಿಯ ಸಾಧಕ-ಬಾಧಕಗಳ ಬಗ್ಗೆ ಚರ್ಚಿಸಲಿದ್ದಾರೆ. ಮೂಲಭೂತ ಸೌಲಭ್ಯ ಸೇರಿದಂತೆ ಅನೇಕ ವಿಚಾರಗಳು ಸಭೆಯಲ್ಲಿ ಚರ್ಚೆಗೆ ಬರಲಿದೆ. ಅಂದಿನ ಸರ್ಕಾರ ಪೊಲೀಸರ ವೇತನ ಹೆಚ್ಚಳಕ್ಕೆ ಎಡಿಜಿಪಿ ರಾಘವೇಂದ್ರ ಔರಾದ್ಕರ್‌ ಅವರ ನೇತೃತ್ವದಲ್ಲಿ ಸಮಿತಿಯನ್ನು ರಚಿಸಿತ್ತು. ಈ ಬಗ್ಗೆ ಅಧ್ಯಯನ ನಡೆಸಿದ್ದ ಸಮಿತಿ ವೇತನ ಹೆಚ್ಚಳಕ್ಕೆ ಸರ್ಕಾರಕ್ಕೆ ಶಿಫಾರಸ್ಸು ಮಾಡಿತ್ತು.  ಈ ಹಿನ್ನೆಲೆಯಲ್ಲಿ ಸೋಮವಾರ ನಡೆಯಲಿರುವ ಸಭೆ ಮಹತ್ವ ಪಡೆದು ಕೊಂಡಿದ್ದು, ಪೊಲೀಸರಿಗೆ ಸಿಹಿ ಸುದ್ದಿ ಸಿಗಲಿದೆ.

ಫ್ರೆಶ್ ನ್ಯೂಸ್

Latest Posts

Featured Videos