ಬೆಂಗಳೂರು: ಇಂದಿನಿಂದ ಫೆಬ್ರವರಿ 15 ರವರೆಗೆ ಬಜೆಟ್ ಅಧಿವೇಶನ ನಡೆಯುತ್ತಿರುವ ಹಿನ್ನೆಲೆಯಲ್ಲಿ ವಿಧಾನಸೌಧದ ಸುತ್ತಮುತ್ತ ಬಿಗಿ ಭದ್ರತೆ ನಿಯೋಜಿಸಲಾಗಿದೆ.
4 ಎಸಿಪಿ, 6 ಕೆಎಸ್ಆರ್ಪಿ ತುಕಡಿ ಸೇರಿದಂತೆ 200ಕ್ಕೂ ಹೆಚ್ಚು ಪೊಲೀಸರನ್ನ ನಿಯೋಜನೆ ಮಾಡಲಾಗಿದೆ. ಎಲ್ಲಾ ಪ್ರವೇಶ ದ್ವಾರಗಳಲ್ಲೂ ಪೊಲೀಸರಿದ್ದು, ಪಾಸ್ ಇದ್ದವರಿಗೆ ಮಾತ್ರ ಪ್ರವೇಶಾವಕಾಶ ನೀಡಲಾಗುತ್ತಿದೆ. ವಿಧಾನಸೌಧದ ಸುತ್ತ ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿದೆ.