ಈದ್ ಮಿಲಾದ್ ಆಚರಣೆಗೆ ಪೊಲೀಸ್ ಮಾರ್ಗಸೂಚಿ

ಈದ್ ಮಿಲಾದ್ ಆಚರಣೆಗೆ ಪೊಲೀಸ್ ಮಾರ್ಗಸೂಚಿ

ಬೆಂಗಳೂರು: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಸಂದರ್ಭದಲ್ಲಿ ಹಿಂಸಾಚಾರದ ಘಟನೆ ನಡೆದ ಬೆನ್ನಲ್ಲೇ ಎಚ್ಚೆತ್ತುಕೊಂಡ ಪೊಲೀಸ್ ಅಧಿಕಾರಿಗಳು ಇದೀಗ  ಮುಸ್ಲಿಮರ ಪವಿತ್ರ ಹಬ್ಬವಾದ ಈದ್ ಮಿಲಾದ್ ಇದೇ ಸೋಮವಾರ ರಾಜದಾದ್ಯಂತ ಆಚರಿಸಲಾಗುತ್ತಿದ್ದು ಈ ಈದ್ ಮಿಲಾದ್ ಹಬ್ಬದಲ್ಲಿ ಯಾವುದೇ ಡಿಜೆ ಸೌಂಡ್ ಇನ್ನಿತರ ಸೌಂಡ್ ಬಳಸಿದಂತೆ ಬೆಂಗಳೂರು ನಗರ ಪೊಲೀಸ್ ಅಧಿಕಾರಿಗಳು ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದ್ದಾರೆ

ಯೆಸ್.. ಸೋಮವಾರ‌ (ಸೆ.16) ರಂದು ಬೆಂಗಳೂರು ನಗರದಲ್ಲಿ ಈದ್​ಮಿಲಾದ್​ ಹಬ್ಬದ ಪ್ರಯುಕ್ತ ಮೆರವಣಿಗೆ ನಡೆಯಲಿದ್ದು, ಈ ಮೆರವಣಿಗೆಯಲ್ಲಿ ಪಾಲಿಸಬೇಕಾದ ಕೆಲ ಸೂಚನೆಗಳನ್ನು ಪೊಲೀಸರು ಹೊರಡಿಸಿದ್ದಾರೆ. ಒಂದು ವೇಳೆ ನಿಬಂಧನೆಗಳನ್ನು ಪಾಲಿಸದಿದ್ದರೆ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.

ವೈ.ಎಂ.ಸಿ.ಎ. ಮೈದಾನ, ಮಿಲ್ಲರ್ನ ರಸ್ತೆ ಖುದ್ದುಸಾಬ್ ಈದ್ಗಾ ಮೈದಾನ, ಶಿವಾಜಿನಗರ ಛೋಟಾ ಮೈದಾನ, ಭಾರತೀನಗರದ ಸುಲ್ತಾನ್‌ಜೀ ಗುಂಟಾ ಮೈದಾನಗಳಲ್ಲಿ ಹಾಗೂ ಇತರೆಡೆಗಳಲ್ಲಿ ಕಾರ್ಯಕ್ರಮಗಳು ನಡೆಯಲಿವೆ. ಈ ಸಂಬಂಧ ಹಬ್ಬದ ದಿನದಂದು ಕೆಲವು ಸೂಚನೆಗಳನ್ನು ಪಾಲಿಸುವಂತೆ ಬೆಂಗಳೂರು ಪೊಲೀಸ್​ ಆದೇಶ ಹೊರಡಿಸಿದೆ.

*ಮೆರವಣಿಗೆಯಲ್ಲಿ ಪಾಲ್ಗೊಳ್ಳುವವರು ಯಾವುದೆ ಹರಿತವಾದ ವಸ್ತುಗಳನ್ನು ಹೊಂದಿರಬಾರದು.

*ಮೆರವಣಿಗೆಯ ಸಮಯದಲ್ಲಿ ಯಾವುದೇ ಕಾರಣಕ್ಕೂ ಡಿಜೆಗಳನ್ನು ಬಳಸಬಾರದು.

*ಸ್ತಬ್ದ ಚಿತ್ರಗಳು ಯಾವುದೇ ಪ್ರಚೋದನಾತ್ಮಕ ಅಂಶಗಳನ್ನು ಒಳಗೊಂಡಿರಬಾರದು.

*ಯಾವುದೇ ಪೂಜಾ ಸ್ಥಳಗಳ (ದೇವಸ್ಥಾನ/ಚರ್ಚ್ ಗಳ) ಮುಂಭಾಗದಲ್ಲಿ ಘೋಷಣೆಗಳನ್ನು ಕೂಗಬಾರದು.

*ಮೆರವಣಿಗೆಯ ಸಮಯದಲ್ಲಿ ಆಯೋಜಕರು ವಿದ್ಯುತ್ (ಕೆ.ಇ.ಬಿ) ಇಲಾಖೆಯಿಂದ ಸಿಬ್ಬಂದಿಯವರನ್ನು ನೇಮಿಸಿಕೊಂಡು ಯಾವುದೇ ವಿದ್ಯುತ್ ಸಂಪರ್ಕಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು.

*ಮೆರವಣಿಗೆಯ ಸಂದರ್ಭದಲ್ಲಿ ಆಯೋಜಕರು ಬೆಂಕಿನಂದಿಸುವ ಸಾಮಗ್ರಿಯನ್ನು ಇಟ್ಟುಕೊಂಡಿರಬೇಕು.

*ರಾತ್ರಿ ಮೆರವಣಿಗೆ ಮುಗಿದ ನಂತರ ಬೈಕ್‌ನಲ್ಲಿ ಇಬ್ಬರಿಗಿಂತ ಹೆಚ್ಚಾಗಿ ದ್ವಿ-ಚಕ್ರ ವಾಹನವನ್ನು ಚಲಿಸಬಾರದು.

*ಹಿರಿಯ ನಾಗಕರಿಕರಿಗೆ ಶಾಲಾ ಮಕ್ಕಳಿಗೆ ಹಾಗೂ ಇತರರಿಗೆ ತೊಂದರೆಯಾಗದಂತೆ ಧ್ವನಿವರ್ಧಕಗಳನ್ನು ಬೆಳಿಗ್ಗೆ 06-00 ಗಂಟೆಯಿಂದ ರಾತ್ರಿ 10-00 ಗಂಟೆಯವರೆಗೆ ಮಾತ್ರ ಬಳಸಿಕೊಳ್ಳಬೇಕು.

*ಧ್ವನಿವರ್ಧಕಗಳನ್ನು ಬಳಸಲು ಸ್ಥಳೀಯ ಪೊಲೀಸರ ಅನುಮತಿ/ಪರವಾನಗಿ ಪಡೆದುಕೊಳ್ಳಬೇಕು.

ಫ್ರೆಶ್ ನ್ಯೂಸ್

Latest Posts

Featured Videos